Friday, October 25, 2024

ಸತ್ಯ | ನ್ಯಾಯ |ಧರ್ಮ

ಮೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಗೆಲುವು – ಮಾಜಿ ಸಚಿವ ಎನ್ ಮಹೇಶ್

ಹಾಸನ : ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದ ಮತದದಾರು ಪ್ರಜ್ಞಾವಂತಿಕೆಯಿಂದ ಮತ ಹಾಕಬೇಕು. ಮೈತ್ರಿಯ ಮೂವರು ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ ಎಂದು ಮೊದಲ ಬಾರಿಗೆ ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಮಾಜಿ ಸಚಿವ ಎನ್. ಮಹೇಶ್ ಪಡೆದ ನಂತರ ಮಾತನಾಡಿದರು.

ಮಾಧ್ಯಮದೊಂದಿಗೆ ಮಾಜಿ ಸಚಿವ ಎನ್. ಮಹೇಶ್ ಮಾತನಾಡಿ, ಹಾಸನಾಂಬೆ ದೇವಿ ದರ್ಶನ ಮಾಡಬೇಕೆಂಬುದು ಹಲವು ವರ್ಷಗಳ ಬಯಕೆ ಇತ್ತು. ನಾನು ಶಾಸಕ, ಸಚಿವನಾಗಿದ್ದಾಗ ಅವಕಾಶ ಸಿಕ್ಕಿರಲಿಲ್ಲ. ಇವತ್ತು ತಾಯಿ ದರ್ಶನ ಮಾಡುವ ಸೌಭಾಗ್ಯ ಸಿಕ್ಕಿದೆ. ಈ ವರ್ಷ ಒಳ್ಳೆಯ ಮಳೆಯಾಗಿದೆ. ಬೆಂಗಳೂರು ಮತ್ತು ಕೆಲವು ಕಡೆ ಅನಾಹುತ ಕೂಡ ಆಗಿದೆ. ಮಳೆ, ಬೆಳೆ ಚೆನ್ನಾಗಿ ಆಗಿದೆ, ರಾಜ್ಯದ ಯಾವ ಮೂಲೆಯಲ್ಲಿ ಅನಾಹುತ ಆಗುವುದು ಬೇಡ ಎಂದು ತಾಯಿಯಲ್ಲಿ ಬೇಡಿದ್ದೇನೆ. ಇದೊಂದು ಬಹಳ ವಿಶೇಷವಾದ ಶಕ್ತಿಪೀಠವಾಗಿದೆ. ದೇವಿಯನ್ನು ಹತ್ತಿರದಲ್ಲಿ ನೋಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದರು.

ಮೂರು ಕಡೆ ಬೈ ಎಲೆಕ್ಷನ್ ನಡೆಯುತ್ತಿದ್ದು, ಎರಡು ಕಡೆ ಬಿಜೆಪಿ, ಒಂದು ಕಡೆ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇದ್ದಾರೆ. ಈ ಮೂರು ಜನರ ಗೆಲುವಿಗೆ ತಾಯಿ ಆಶೀರ್ವಾದ ಮಾಡು ಎಂದು ಕೇಳಿಕೊಳ್ಳುತ್ತೇನೆ. ಮೂರು ಕಡೆ ಗೆಲ್ತಿವಿ, ಈ ಚುನಾವಣೆ ಸಾರ್ವತ್ರಿಕ ಚುನಾವಣೆ ಅಲ್ಲ, ಇದು ಉಪಚುನಾವಣೆ. ಈ ಮೂರು ಕ್ಷೇತ್ರದ ಮತದದಾರು ಪ್ರಜ್ಞಾವಂತಿಕೆಯಿಂದ ಮತ ಹಾಕಬೇಕು. ಒಂದುವರೆ ವರ್ಷ ಕಾಂಗ್ರೆಸ್ನ ದುರಾಡಳಿತವನ್ನು ಜನ ನೋಡಿದ್ದಾರೆ. ಇನ್ನೂ ಮೂರುವರೆ ವರ್ಷ ಈ ದುರಾಡಳಿತ ನಡೆಯಬಾರದು ಎಂದರೆ ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದರು. ಆಗ ಸಿದ್ದರಾಮಯ್ಯ ಇಲ್ಲಾ ಅಂದರೆ ಬೇರೆಯವರು ಬಂದರೆ ಯಶಸ್ವಿಯಾಗಿ ಕೆಲಸ ಮಾಡ್ತಾರೆ. ಮೂರು ಕಡೆ ಗೆದ್ದರೆ ರಾಜ್ಯ ಜನರನ್ನ ಲಘುವಾಗಿ ತೆಗೆದುಕೊಳ್ಳುತ್ತಾರೆ. ಹಾಗಾಗಿ ಒಂದುವರೆ ವರ್ಷದ ಕಾಂಗ್ರೆಸ್ ಆಡಳಿತ ನೋಡಿದ್ದು, ಎಸ್ಪಿ, ಎಸ್ಟಿ ಹಣ ಲೂಟಿ, ಮೂಡಾ ಹಗರಣ, ಅಭಿವೃದ್ಧಿ ಕೆಲಸ ಆಗ್ತಿಲ್ಲ. ಅದನ್ನು ಗಮನಿಸಿ ಈ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಕೊಡುವ ಸುವರ್ಣಾವಾಕಾಶ ಇದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಮೂರು ಕಡೆ ಸೋಲಿಸುವ ಮೂಲಕ ಇದೊಂದು ದಿಕ್ಸೂಚಿ ಆಗಬೇಕು. ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಹಾಗೆ ಆಗುತ್ತದೆ. ಚುನಾವಣೆ ಮುಗಿದ ಮೇಲೆ ಸರ್ಕಾರ ಇರುತ್ತೋ, ಇಲ್ವೋ ಗೊತ್ತಾಗುತ್ತದೆ ಎಂದು ಎಚ್ಚರಿಸಿದರು. ಬೈ ಎಲೆಕ್ಷನ್ ಬಂದಿರುವುದರಿಂದ ಶೇಕ್ ಆಗ್ತಿದ್ದವರು ನಿಂತಿದ್ದಾರೆ. ಚುನಾವಣೆ ಮುಗಿದ ತಕ್ಷಣ ಗೊತ್ತಾಗುತ್ತದೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page