ಕಾಂಗ್ರೆಸ್‌ ಬಾಗಿಲು ಬಡಿಯುತ್ತಿರುವ ಬಿಜೆಪಿ-ಜೆಡಿ(ಎಸ್) ನಾಯಕರು; ಸಿಎಂ ಜೊತೆ ಚರ್ಚಿಸಿ ನಿರ್ಧಾರ‌ – ಡಿಸಿಎಮ್ ಡಿಕೆ ಶಿವಕುಮಾರ್

ಬೆಂಗಳೂರು: ಮೈತ್ರಿಯಿಂದ ಅಸಮಾಧಾನಗೊಂಡಿರುವ ಬಿಜೆಪಿ ಮತ್ತು ಜೆಡಿಎಸ್‌ನ ನಾಯಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು.

ತಳಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಸೇರಿಸಿಕೊಳ್ಳಲು ನಾವು ಹಸಿರು ನಿಶಾನೆ ತೋರಿದ್ದೇವೆ. ಪಕ್ಷಾಂತರ ವಿರೋಧಿ ಕಾನೂನಿನ ಬಗ್ಗೆಯೂ ಕುರಿತಾಗಿಯೂ ಜಾಗರೂಕರಾಗಿದ್ದೇವೆ ಎಂದು ಅವರು ಹೇಳಿದರು.

ಮೈತ್ರಿ ಘೋಷಣೆಯ ನಂತರ, ಹೆಚ್ಚಿನ ಸಂಖ್ಯೆಯ ನಾಯಕರು, ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಜೆಡಿಎಸ್ (ಎಸ್) ತೊರೆಯಲು ನಿರ್ಧರಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಈ ಬೆಳವಣಿಗೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದರೆ ಈಗಾಗಲೇ ಮುಸ್ಲಿಂ ಮುಖಂಡರು ಈ ಬಗ್ಗೆ ಸಭೆ ನಡೆಸಿದ್ದಾರೆ.

ಲೋಕಸಭೆ ಸ್ಥಾನಗಳಿಗೆ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿರುವ ಕುರಿತು ಕೇಳಿದ ಪ್ರಶ್ನೆಗೆ, ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಈಗಾಗಲೇ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ವಿದೇಶದಲ್ಲಿದ್ದು, ವಿದ್ಯುತ್ ಸಚಿವ ಕೆ.ಜೆ.ಜಾರ್ಜ್ ಅವರು ಪಕ್ಷದ ಕೇಂದ್ರ ಸಮಿತಿಯಲ್ಲಿರುವುದರಿಂದ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

“ನಾನು 10 ದಿನಗಳಲ್ಲಿ ಎಲ್ಲಾ ಲೋಕಸಭಾ ಸ್ಥಾನಗಳ ವರದಿಯನ್ನು ಪಡೆಲಿದ್ದೇನೆ. ಪ್ರತಿ ಕ್ಷೇತ್ರಕ್ಕೆ ಎರಡರಿಂದ ಮೂರು ಹೆಸರು ಅಂತಿಮವಾಗುವ ನಿರೀಕ್ಷೆ ಇದೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನವರಿಗೂ ಮೊದಲು ಬಿಡುಗಡೆ ಮಾಡಲಾಗುವುದು ಎಂದು ಶಿವಕುಮಾರ್ ವಿವರಿಸಿದರು.

ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಚರ್ಚಿಸಬೇಡಿ ಎಂದು ಸಚಿವರಿಗೆ ಹೈಕಮಾಂಡ್ ಪತ್ರ ಬರೆದಿರುವ ಕುರಿತು ಕೇಳಿದಾಗ, ಶಿವಕುಮಾರ್ ಆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

Related Articles

ಇತ್ತೀಚಿನ ಸುದ್ದಿಗಳು