ದ್ವಿಚಕ್ರ ವಾಹನ ಸವಾರನ ಮೇಲೆ ಮುಗಿಬಿದ್ದ – ಬಿಜೆಪಿ ನಾಯಕ ರಾಜ್ ಕುಮಾರ್ ಪಾಟೀಲ್

ಕಲಬುರಗಿ : ಕಲಬುರಗಿಯಲ್ಲಿ ನಡೆಯುತ್ತಿದ್ದ ಬಿಜೆಪಿ ಪ್ರತಿಭಟನೆ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದ್ದು, ಪ್ರತಿಭಟನೆ ವೇಳೆ ಅಡ್ಡ ಬಂದ ಕಾರಣಕ್ಕೇ ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್ ದ್ವಿಚಕ್ರ ವಾಹನ ಸವಾರನೊಬ್ಬನ ವಿರುದ್ಧ ಕೆಂಡಾಮಂಡಲವಾದ ಘಟನೆ ನಡೆದಿದೆ.

ಇತ್ತೀಚೆಗೆ ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಕಲಬುರಗಿಯ ಸೇಡಂ ಅನ್ನು ಕೈ ಬಿಡಲಾಗಿತ್ತು. ಇದೇ ವಿಚಾರವಾಗಿ ಜಿಲ್ಲೆಯ ಬಿಜೆಪಿ ನಾಯಕರು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬೈಕರ್‌ವೊಬ್ಬರು ಪ್ರತಿಭಟನಾಕಾರರ ನಡುವಿನಿಂದ ವಾಹನ ಚಲಾಯಿಸಿಕೊಂಡು ಮುಂದೆ ಸಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರನ್ನು ತಡೆದ ಮಾಜಿ ಶಾಸಕ ತೆಲ್ಕೂರ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಮಾತಿನ ಚಕಮಕಿ ನಡೆದಿದೆ.

Related Articles

ಇತ್ತೀಚಿನ ಸುದ್ದಿಗಳು