Friday, June 14, 2024

ಸತ್ಯ | ನ್ಯಾಯ |ಧರ್ಮ

ಮಹಿಳೆಯರ ಬಗ್ಗೆ ಬಿಜೆಪಿ ನಾಯಕಿ ಶೃತಿ ತುಚ್ಛ ಹೇಳಿಕೆ ; ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ

ದೇವಸ್ಥಾನಗಳಿಗೆ ಹೋಗುವ ನೆಪದಲ್ಲಿ ರಾಜ್ಯದ ಗ್ಯಾರಂಟಿ ಫಲಾನುಭವಿ ಮಹಿಳೆಯರು ಎಲ್ಲೆಲ್ಲೋ ಹೋಗುತ್ತಿದ್ದಾರೆ. ಮನೆಯ ಗಂಡಸರು ಹೆಂಡತಿ ಮನೆ ಬಿಟ್ಟು ಹೋದಳೆಂದು ಗೋಳಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕಿ ಶೃತಿ ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿದ್ದು, ನಟಿ ಶೃತಿ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂಬ ಕೂಗು ಕೇಳಿ ಬಂದಿವೆ. ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ, ಸ್ವಾವಲಂಬಿಗಳಾಗಿ ಬದುಕಲಿ ಎಂದು ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಇವು ಬಡ, ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿ ಎಂಬ ಉದ್ಧೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಡಿ ರಾಜ್ಯದ ಕೋಟ್ಯಂತರ ಮಹಿಳೆಯರು ಫಲಾನುಭವಿಗಳಾಗಿರುವಾಗ, ಗ್ಯಾರಂಟಿ ಯೋಜನೆ ಫಲಾನುಭವಿ ಹೆಂಗಸರ ಬಗ್ಗೆ ಅತ್ಯಂತ ಕೆಟ್ಟದಾಗಿ ಬಿಂಬಿಸಿರುವ ಬಿಜೆಪಿ ನಾಯಕಿ ಚಿತ್ರನಟಿ ಶೃತಿ ಬಗ್ಗೆ ಆಕ್ರೋಶ ಹೊರಬಿದ್ದಿದೆ.

ಅಷ್ಟೇ ಅಲ್ಲದೇ “ರಾಜ್ಯದ ಹೆಣ್ಣು ಮಕ್ಕಳು ಗ್ಯಾರಂಟಿ ಯೋಜನೆಯ ಕಾರಣಕ್ಕೆ ಬೀದಿಬೀದಿಗಳಲ್ಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಸಂಸ್ಕೃತಿ, ಸಂಸ್ಕಾರ ಮರೆತು ಗೊತ್ತುಗುರಿ ಇಲ್ಲದಂತಾಗಿದ್ದಾರೆ. ಮನೆಯಲ್ಲಿ ಮಕ್ಕಳು ಊಟ ಇಲ್ಲದೇ ಪರಿತಪಿಸುತ್ತಿದ್ದಾರೆ..” ಎನ್ನುವ ಮೂಲಕ ನಟಿ ಶೃತಿ ಚುನಾವಣಾ ಭಾಷಣದಲ್ಲಿ ಅತ್ಯಂತ ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ನಟಿ ಶೃತಿ ಮೇಲೆ ಸರ್ಕಾರ ಕ್ರಮ ಜರುಗಿಸಲು ಒತ್ತಾಯಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು