Home ರಾಜ್ಯ ಉಡುಪಿ 🚨ಮಣಿಪಾಲ | ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ: ಪೋಕ್ಸೊ ಪ್ರಕರಣ...

🚨ಮಣಿಪಾಲ | ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ: ಪೋಕ್ಸೊ ಪ್ರಕರಣ ದಾಖಲು

0

ಮಣಿಪಾಲದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಯುವಕನೊಬ್ಬ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಆರೋಪಿಯು ಕಟಪಾಡಿ ಮಣಿಪುರದ ನಿವಾಸಿ, 20 ವರ್ಷದ ಶ್ರೀಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಈತ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ ಎಂದು ತಿಳಿದುಬಂದಿದೆ.

ಶ್ರೀಶಾಂತ್ ಪೂಜಾರಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದುವೆಯಾಗುವ ಆಮಿಷವೊಡ್ಡಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಈ ವಿಷಯ ತಿಳಿದ ಬಾಲಕಿಯ ಪೋಷಕರು ನೇರವಾಗಿ ಪೊಲೀಸರೊಂದಿಗೆ ಲಾಡ್ಜ್‌ಗೆ ದಾಳಿ ನಡೆಸಿದ್ದಾರೆ. ಆರೋಪಿಯು ಲಾಡ್ಜ್‌ಗೆ ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿದ್ದನು.

ಘಟನೆ ಬೆಳಕಿಗೆ ಬಂದ ನಂತರ, ಪೊಲೀಸರು ಶ್ರೀಶಾಂತ್ ಪೂಜಾರಿ ವಿರುದ್ಧ ಪೋಕ್ಸೊ (POCSO) ಪ್ರಕರಣ ದಾಖಲಿಸಿದ್ದಾರೆ. ಈ ನಡುವೆ, ಇದೇ ಆರೋಪಿಯ ವಿರುದ್ಧ ಮತ್ತೊಬ್ಬ ಅಪ್ರಾಪ್ತ ಬಾಲಕಿ ಕೂಡ ದೂರು ದಾಖಲಿಸಿದ್ದಾಳೆ. ಶ್ರೀಶಾಂತ್ ತನಗೂ ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದನು ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

You cannot copy content of this page

Exit mobile version