Sunday, June 30, 2024

ಸತ್ಯ | ನ್ಯಾಯ |ಧರ್ಮ

‘ಪಕ್ಷಕ್ಕೆ ಬಂದರೆ ಪ್ರಕರಣ ವಾಪಸ್’ ; ಬಿಜೆಪಿ ಮೇಲೆ ಸಿಸೋಡಿಯಾ ಗಂಭೀರ ಆರೋಪ

ದೆಹಲಿ ರಾಜ್ಯದ ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ ನಡೆಸುತ್ತಿದೆ. ಭ್ರಷ್ಟಾಚಾರದ ಯಾವುದೇ ಒಂದು ಸಣ್ಣ ಸಾಕ್ಷ್ಯ ಸಿಕ್ಕರೂ ಮನೀಶ್ ಸಿಸೋಡಿಯಾ ಬಂಧನ ಆಗಬಹುದು ಎಂದೇ ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆ ಮನೀಶ್ ಸಿಸೋಡಿಯಾ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದರೂ ಅಗತ್ಯ ದಾಖಲೆಗಳು ಸಿಗುತ್ತಿಲ್ಲ ಎಂಬುದು ಪ್ರಾಥಮಿಕ ಮಾಹಿತಿಯಾಗಿದೆ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

ಇದರ ಬೆನ್ನಲ್ಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಪಕ್ಷಕ್ಕೆ ಸೇರ್ಪಡೆಗೊಂಡರೆ ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಕ್ತಾಯಗೊಳಿಸುವ ಪ್ರಸ್ತಾಪದೊಂದಿಗೆ ಬಿಜೆಪಿ ತನ್ನನ್ನು ಸಂಪರ್ಕಿಸಿದೆ ಎಂದು ಹೊಸ ಬಾಂಬ್ ಹಾಕಿದ್ದಾರೆ.

ಬಿಜೆಪಿ ಪಕ್ಷಕ್ಕೆ ನಿಜವಾದ ತೊಂದರೆ ಆಗುತ್ತಿರುವುದು ನಮ್ಮ ಎಎಪಿ ಪಕ್ಷದಿಂದ. ಈ ಕಾರಣಕ್ಕೆ ಇಂತಹ ನಾನಾ ರೀತಿಯ ಆರೋಪಗಳನ್ನಿಟ್ಟು ನಮ್ಮನ್ನು ಕಟ್ಟಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಮನೀಶ್ ಸಿಸೋಡಿಯಾ ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಆರೋಪಿಸಿದ್ದಾರೆ. ನಾವು ಯಾವುದೇ ರೀತಿಯ ಭ್ರಷ್ಟಾಚಾರ ಮಾಡಿಲ್ಲ.. ಇವೆಲ್ಲವೂ ನಮ್ಮನ್ನು ಸುಮ್ಮನಾಗಿಸುವ ತಂತ್ರ ಎಂದು ಮನೀಶ್ ಸಿಸೋಡಿಯಾ ಬಿಜೆಪಿ ಪಕ್ಷದ ಮೇಲೆ ಆರೋಪಿಸಿದ್ದಾರೆ.

ಈ ನಡುವೆ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಮೇಲೆ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಇಲಾಖೆ ED ಯೋಂದಿಗೆ ದಾಖಲೆಗಳನ್ನು ಹಂಚಿಕೊಂಡಿತ್ತು. ಸಧ್ಯ ಈ ಪ್ರಕರಣದಲ್ಲಿ ಒಟ್ಟು 15 ಮಂದಿ ಮೇಲೆ FIR ದಾಖಲು ಮಾಡಲಾಗಿದ್ದು ಮನೀಶ್ ಸಿಸೋಡಿಯಾ ಅವರನ್ನು ಆರೋಪಿ 1 ಎಂದು ಉಲ್ಲೇಖಿಸಲಾಗಿದೆ.

ಇದರ ಬೆನ್ನಲ್ಲೇ ಬಿಜೆಪಿ ತನ್ನನ್ನು ಪಕ್ಷಕ್ಕೆ ಆಹ್ವಾನಿಸಿದೆ. ಬಿಜೆಪಿಗೆ ಸೇರ್ಪಡೆಗೊಂಡರೆ ಈ ಎಲ್ಲಾ ಪ್ರಕರಣಗಳಿಂದ ಮುಕ್ತಿ ಕೊಡಿಸುತ್ತೇವೆ ಎಂದು ಬಿಜೆಪಿ ಬೇಡಿಕೆ ಇಟ್ಟ ಆರೋಪ ಈಗ ಎಲ್ಲೆಡೆ ಚರ್ಚಿತ ವಿಚಾರವಾಗಿದೆ.

Related Articles

ಇತ್ತೀಚಿನ ಸುದ್ದಿಗಳು