16ರಂದು ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ ಪ್ರಚಾರ ನಡೆಸುವಂತೆ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ ಒತ್ತಾಯಿಸಿದರು. ಸೋಮವಾರ ಯಶವಂತಪುರದ ಶಾಸಕರ ಕಚೇರಿಯಲ್ಲಿ ಈ ಸಭೆ ನಡೆಯಿತು.
ಬಿಜೆಪಿ ಚಟುವಟಿಕೆಗಳಿಂದ ದೂರ ಉಳಿದಿದ್ದ ಸೋಮಶೇಖರ್ ಪಕ್ಷವು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ.
ಸೋಮಶೇಖರ್ ಈ ಹಿಂದೆ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ರಾಜ್ಯ ಬಿಜೆಪಿ ನಾಯಕರ ಬಳಿ ಈ ವಿಷಯವನ್ನು ಪ್ರಸ್ತಾಪಿಸಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮಶೇಖರ್ ಅವರೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಿದ್ದರು. ಆದರೆ, ಸೋಮಶೇಖರ್ ಕಾಂಗ್ರೆಸ್ ಎಂಎಲ್‌ಸಿ ಅಭ್ಯರ್ಥಿಗೆ ಸಾರ್ವಜನಿಕ ಬೆಂಬಲ ನೀಡಿದ್ದು, ಬಿಜೆಪಿ ನಾಯಕರೊಂದಿಗಿನ ಚರ್ಚೆ ಯಾವುದೇ ಸಕಾರಾತ್ಮಕ ಫಲಿತಾಂಶವನ್ನು ನೀಡಿಲ್ಲವೆನ್ನುವುದನ್ನು ಇದು ಸೂಚಿಸುತ್ತದೆ.
ಅಲ್ಲದೆ, ಸೋಮಶೇಖರ್ ಜತೆಗಿನ ಒಡನಾಟದಿಂದ ಹಿಂದೆ ಅಮಾನತುಗೊಂಡಿದ್ದ ಕೆಲ ಸ್ಥಳೀಯ ಬಿಜೆಪಿ ಮುಖಂಡರ ಅಮಾನತನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇತ್ತೀಚೆಗೆ ಹಿಂಪಡೆದಿದ್ದಾರೆ.
ಆದರೆ ಸೋಮಶೇಖರ್ ಅವರು ತಮ್ಮ ಪಕ್ಷ ವಿರೋಧಿ ಚಟುವಟಿಕೆಯನ್ನು ಮುಂದುವರೆಸಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವುದು ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದರ ಸೂಚನೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆ.ಪ್ರಚಾರದ ವೇಳೆ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರಿಂದ ಕಾಂಗ್ರೆಸ್ ಎಂಎಲ್‌ಸಿ ಅಭ್ಯರ್ಥಿಗೆ ಬೆಂಬಲ.