ನವದೆಹಲಿ: ತ್ರಿಪುರಾ ರಾಜ್ಯದ ರಾಜ್ಯಸಭಾ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ಬಿಜೆಪಿ ಹೆಸರಿಸಿದೆ. ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಲ್ಲಿಯೂ ದೇಬ್ ಸ್ಪರ್ಧಿಸಲಿದ್ದು, ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿರುವುದರಿಂದ ಬಿಪ್ಲಬ್ ಕುಮಾರ್ ದೇಬ್ ಅವರ ಗೆಲುವು ಖಚಿತವಾಗಿದೆ ಎಂದು ಬಿಜೆಪಿ ಹೇಳಿದೆ.