ಬಿಜೆಪಿ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ: ಬೊಮ್ಮಾಯಿಗೆ ಡಿ.ಕೆ.ಶಿ ತಿರುಗೇಟು

ಮೈಸೂರು: ಕಾಂಗ್ರೆಸ್‌ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಹೌದು, ನಾನು ಜಾಮೀನಿನ ಮೇಲೆ ಇದ್ದೇನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಬಿಜೆಪಿಯ ಹತ್ತಾರು ಮಂದಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಅಷ್ಟೇಲ್ಲಾ ಏಕೆ ಯಡಿಯೂರಪ್ಪ ವಿರುದ್ಧ ಕೇಸ್ ಇಲ್ಲವೇ? ಎಂದು ಪ್ರಶ್ನಿಸಿದರು.

ನನ್ನ ವಿರುದ್ಧ ಬೊಮ್ಮಾಯಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ನನ್ನನ್ನು ಪರಪ್ಪನ ಅಗ್ರಹಾರಕ್ಕೆ (ಕೇಂದ್ರ ಕಾರಾಗೃಹ) ಕಳುಹಿಸಲಿ, ನಾನು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದು ಡಿ.ಕೆ.ಶಿ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು