Wednesday, July 30, 2025

ಸತ್ಯ | ನ್ಯಾಯ |ಧರ್ಮ

ಪ್ರತಿ ಗಂಟೆಗೆ ನಾಲ್ವರ ಮೇಲೆ ಅತ್ಯಾ*ಚಾರ: ಕಳೆದ ಹತ್ತು ವರ್ಷಗಳಲ್ಲಿ 3.2 ಲಕ್ಷಕ್ಕೂ ಹೆಚ್ಚು ಮಹಿಳೆಯರ ಮೇಲೆ ದೌರ್ಜನ್ಯ

ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ದೇಶದಲ್ಲಿ ಎಲ್ಲೋ ಒಂದು ಕಡೆ, ಸರಾಸರಿ ಪ್ರತಿ ಗಂಟೆಗೆ ನಾಲ್ವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ 2023 ರವರೆಗೆ, ಅಂದರೆ ಹತ್ತು ವರ್ಷಗಳಲ್ಲಿ, ದೇಶದಲ್ಲಿ 3,20,196 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ.

ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (NCRB) ಅಂಕಿಅಂಶಗಳನ್ನು ವಿಶ್ಲೇಷಿಸಿದಾಗ ಈ ಆತಂಕಕಾರಿ ಸತ್ಯ ಹೊರಬಿದ್ದಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ಮಹಿಳೆಯರ ಮೇಲೆ ಅತಿ ಹೆಚ್ಚು ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಕಳವಳಕಾರಿಯಾಗಿದೆ.

ಟಾಪ್-5 ರಲ್ಲಿ ಬಿಜೆಪಿ ರಾಜ್ಯಗಳು

ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿರುವ ಟಾಪ್-5 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂಬುದು ಗಮನಾರ್ಹ. ವಾರ್ಷಿಕವಾಗಿ ಸರಾಸರಿ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳೊಂದಿಗೆ ರಾಜಸ್ಥಾನ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಹರಿಯಾಣ ನಂತರದ ಸ್ಥಾನಗಳಲ್ಲಿವೆ.

ನ್ಯೂಸ್18 ಇಂಗ್ಲಿಷ್ ವೆಬ್‌ಸೈಟ್‌ನ ವರದಿಯ ಪ್ರಕಾರ, 2017 ರಿಂದ 2022 ರ ನಡುವೆ ದೇಶದಲ್ಲಿ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಸರಾಸರಿ 82 ಪ್ರಕರಣಗಳಲ್ಲಿ ಬಲಿಪಶುಗಳಿಗೆ ಪರಿಚಿತರೇ ಈ ಕೃತ್ಯ ಎಸಗಿದ್ದಾರೆ ಎಂದು ವರದಿ ವಿವರಿಸಿದೆ.

18-30 ವರ್ಷ ವಯಸ್ಸಿನವರ ಮೇಲೆ ಶೇ. 65 ರಷ್ಟು ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ ಎಂದು ಅದು ತಿಳಿಸಿದೆ. NCRB ವರದಿಯ ಪ್ರಕಾರ, ಕೆಲಸ ಮಾಡುವ ಸ್ಥಳಗಳಲ್ಲಿಯೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಎಂಬುದು ಸ್ಪಷ್ಟವಾಗಿದೆ. 2014 ರಿಂದ 2022 ರ ನಡುವೆ ಈ ರೀತಿಯ 4,231 ಪ್ರಕರಣಗಳು ದಾಖಲಾಗಿವೆ ಎಂದು ದಾಖಲೆಗಳು ಹೇಳುತ್ತವೆ.

ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿರುವ ಟಾಪ್-5 ರಾಜ್ಯಗಳು:

ರಾಜಸ್ಥಾನ

ಉತ್ತರ ಪ್ರದೇಶ

ಮಧ್ಯಪ್ರದೇಶ

ಮಹಾರಾಷ್ಟ್ರ

ಹರಿಯಾಣ

Related Articles

ಇತ್ತೀಚಿನ ಸುದ್ದಿಗಳು

You cannot copy content of this page