Friday, July 18, 2025

ಸತ್ಯ | ನ್ಯಾಯ |ಧರ್ಮ

ಶಾಸಕರ ಹೆಸರಿನಲ್ಲಿ ಸುಳ್ಳು ಪತ್ರ: ಕಾಂಗ್ರೆಸ್ ವಕ್ತಾರ ಪಿ.ಎಚ್. ನೀರಲಕೇರಿ ಖಂಡನೆ

ಧಾರವಾಡ: ಬಿಜೆಪಿ ಅಥವಾ ಬಿಜೆಪಿ ಪ್ರೇರಿತ ಕಿಡಗೇಡಿಗಳು ಕಾಂಗ್ರೆಸ್ ಶಾಸಕರಾದ ಬಿ.ಆರ್. ಪಾಟೀಲ್ ಅವರ ಹೆಸರಿನಲ್ಲಿ ಸುಳ್ಳು ಪತ್ರ ಸೃಷ್ಟಿಸಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪಿ.ಎಚ್. ನೀರಲಕೇರಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಎಂ ಹಾಗೂ ಅವರ ಸಚಿವ ಸಂಪುಟ ಸಹೋದ್ಯೋಗಿಗಳ ನಡುವೆ ಅಸಮಾಧಾನ ಸೃಷ್ಟಿಸಲು ಶಾಸಕರ ಹೆಸರಲ್ಲಿ ಸುಳ್ಳು ಪತ್ರಗಳನ್ನು ಸೃಷ್ಟಿಸಲಾಗಿದೆ. ಈಗಾಗಲೇ ಮಾಧ್ಯಮಗಳಿಗೆ ಬಿ.ಆರ್.ಪಾಟೀಲ ಅವರು ಇದೊಂದು‌ ನಕಲಿ ಪತ್ರವೆಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೂಡ ಇಂತಹ ವಿಚಾರಗಳು ಬಂದಾಗ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡುವದನ್ನು ಮಾಡಬೇಕು ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿಯ ಭಾಗವಾಗಿ ಈ ರೀತಿ ಕೆಲವರು ಕೆಲಸ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹರಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ನೀಡಿದ್ದಾರೆ. ಹೀಗಾಗಿ ಸುಳ್ಳು ಸುದ್ದಿಗಳನ್ನು ಹರಡುವವರು ಎಚ್ಚರದಿಂದ ಇರಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page