ಬೆಂಗಳೂರು : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ಸಲುವಾಗಿ ಹಮ್ಮಿಕೊಂಡಿದ್ದ ಸರ್ವೋದಯ ಸಮಾವೇಶದಲ್ಲಿ ಭಾಗವಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ʼ40% ಕಮಿಷನ್ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣʼ ಎಂದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್, ʼಇದು ಇತಿಹಾಸ ರಚಿಸುವ ದಿನ. ರಾಜ್ಯದ ಜನ ದಶಕಗಳಿಂದ ಖರ್ಗೆ ಅವರನ್ನು ಬೆಳೆಸಿಕೊಂಡು ಬಂದಿದೆ. ಬಿಜೆಪಿ ತನ್ನ ಪಕ್ಷದಲ್ಲಿ ಚುನಾವಣೆ ನಡೆಸಲು ಸಾಧ್ಯವೇ? ಸೋನಿಯಾ ಗಾಂಧಿ ಅವರು ಇದನ್ನು ಮಾಡಿ ತೋರಿಸಿದ್ದಾರೆ. ಕಾರ್ಮಿಕರ ಮಗ, ದಲಿತ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ. ಅವರು ಬಡವರು, ಶೋಷಿತರ ಪರ ಧ್ವನಿಯಾಗಿ ಹೋರಾಟ ಮಾಡಿದ್ದಾರೆʼ ಎಂದು ಹೇಳಿದರು.
ʼದೇಶದ ಮೂಲೆ ಮೂಲೆಯ ಕಾರ್ಯಕರ್ತರಿಗೆ ಖರ್ಗೆ ಅವರ ಮೇಲೆ ನಂಬಿಕೆ ಇದೆ. ಈ ವೇದಿಕೆ ಮೂಲಕ ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಕಳೆದ 2 ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸರ್ವಸ್ವ ತ್ಯಾಗ ಮಾಡಿ ಸಂಘಟನೆ ಮಾಡಿದ್ದಾರೆʼ ಎಂದು ಮಾತನಾಡಿದರು.
ʼಈ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ 40% ಕಮಿಷನ್ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣʼ ಎಂದರು.