ಚೆನ್ನೈ: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಶುಕ್ರವಾರ ಘೋಷಿಸಿದ್ದಾರೆ.
1998ರಿಂದ ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟದ ಪಾಲುದಾರ ಪಕ್ಷವಾಗಿದೆ ಮತ್ತು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಮತ್ತು ಪ್ರಧಾನಿ ಮೋದಿ ಹಿಂದೆ ಒಟ್ಟಿಗೆ ಕೆಲಸ ಮಾಡಿದ್ದರು ಎಂದು ಅವರು ನೆನಪಿಸಿಕೊಂಡರು. ಇಪಿಎಸ್ ತಮ್ಮ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುತ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.
ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್!
ತಮಿಳುನಾಡು ಬಿಜೆಪಿಯ ನೂತನ ಅಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಮತ್ತು ಶಾಸಕ ನೈನಾರ್ ನಾಗೇಂದ್ರನ್ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಯನ್ನು ಬಿಜೆಪಿ ನಾಯಕತ್ವ ಸರ್ವಾನುಮತದಿಂದ ಅನುಮೋದಿಸಿತು. ನಯನಾರ್ ನಾಗೇಂದ್ರನ್ ಅವರ ಆಯ್ಕೆಯ ಬಗ್ಗೆ ಶನಿವಾರ ಅಧಿಕೃತ ಘೋಷಣೆ ಹೊರಬೀಳಲಿದೆ. ನಾಗೇಂದ್ರನ್ 2017 ರಲ್ಲಿ ಶಾಸಕರಾಗಿ ಮತ್ತು ಸಚಿವರಾಗಿ ಸೇವೆ ಸಲ್ಲಿಸಿದ್ದರು.