Home ಬೆಂಗಳೂರು ವಾಲ್ಮೀಕಿ ನಿಗಮದ ಹಗರಣ: ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ

ವಾಲ್ಮೀಕಿ ನಿಗಮದ ಹಗರಣ: ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ

0

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆಡಳಿತಾರೂಢ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್‌ಪಿ) ಹಣ ವರ್ಗಾವಣೆ ಮಾಡುತ್ತಿರುವುದನ್ನು ವಿರೋಧಿಸಿ ಜುಲೈ 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ಬಿಜೆಪಿ ಪದಾಧಿಕಾರಿಗಳ ಸಭೆ ಗುರುವಾರ ನಿರ್ಧರಿಸಿತು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ವಿ.ಸುನೀಲ್‌ಕುಮಾರ್, ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣಗಳಲ್ಲಿ ನೇರವಾಗಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು. ಇದರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದರ ಜೊತೆಗೆ ಸಾರ್ವಜನಿಕ ಕ್ಷಮೆಯಾಚನೆಗೂ ಆಗ್ರಹಿಸಲಾಗುವುದು ಎಂದು ಹೇಳಿದರು.

ಪಂಚಾಯತ್‌ ಮಟ್ಟದಿಂದ ಹಿಡಿದು, ರಾಜ್ಯ ಮಟ್ಟದ ತನಕ ಎಲ್ಲಾ ಎಸ್‌ಸಿ/ಎಸ್‌ಟಿ ಮುಖಂಡರನ್ನು ಆಹ್ವಾನಿಸಿ ಅವರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತ ಪಕ್ಷದ ಎಲ್ಲಾ ತಪ್ಪುಗಳನ್ನು ಎತ್ತಿ ತೋರಿಸಲು ಪಕ್ಷವು ನಿರ್ಧರಿಸಿದೆ ಎಂದು ಸುನೀಲ ಕುಮಾರ್ ಹೇಳಿದರು.

You cannot copy content of this page

Exit mobile version