ಅಗರ್ತಲಾ: ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಬರೀದೆಗಿದಿದೆ. ಬಿಜೆಪಿ ಸರ್ಕಾರಗಳ ಜನವಿರೋಧಿ ಮತ್ತು ಮಹಿಳಾ ವಿರೋಧಿ ನೀತಿಗಳ ವಿರುದ್ಧ ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘಟನೆ (AIDWA) ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಹೆಚ್ಚಾಗುತ್ತಿರುವುದರಿಂದ, ಅದನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ.
ಭಾನುವಾರ ರಾತ್ರಿ, ಐದ್ವಾ ಮೋಹನ್‌ಪುರ ಉಪವಿಭಾಗೀಯ ಸಮಿತಿಯ ಕಾರ್ಯದರ್ಶಿ ಝರ್ನಾ ಮಜುಂದಾರ್ ಅವರ ಮನೆ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಅವರ ಮನೆಯ ಬಾಗಿಲು, ಕಿಟಕಿಗಳು ಮತ್ತು ಗೋಡೆಗಳಿಗೆ ಕಪ್ಪು ಬಣ್ಣ ಬಳಿದಿದ್ದಾರೆ. ಅಲ್ಲದೆ, ಮನೆಯ ಬಾಗಿಲು ಮತ್ತು ಗೇಟ್‌ಗೆ ಹೊರಗಿನಿಂದ ಬೀಗ ಹಾಕಿದ್ದಾರೆ.
ಮಜುಂದಾರ್ ಅವರು ಪಕ್ಷದ ಸಭೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಸಮಯದಲ್ಲಿ ಈ ದಾಳಿ ನಡೆದಿದೆ. ಈ ಘಟನೆಯು ಆಕೆಯನ್ನು ಬೆದರಿಸುವ ಮತ್ತು ಅವರ ಹೋರಾಟವನ್ನು ನಿಲ್ಲಿಸುವ ಉದ್ದೇಶದಿಂದ ನಡೆದಿದೆ ಎಂದು ಆರೋಪಿಸಲಾಗಿದೆ.