Home ದೇಶ ದೆಹಲಿ ಆಸ್ಪತ್ರೆಗೆ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ದಾಖಲು: ಶ್ವಾಸಕೋಶದ ಸಮಸ್ಯೆಗೆ ಚಿಕಿತ್ಸೆ

ದೆಹಲಿ ಆಸ್ಪತ್ರೆಗೆ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ದಾಖಲು: ಶ್ವಾಸಕೋಶದ ಸಮಸ್ಯೆಗೆ ಚಿಕಿತ್ಸೆ

0

ದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ಅವರು ಶ್ವಾಸಕೋಶ ಸಂಬಂಧಿತ ಸಮಸ್ಯೆಯಿಂದಾಗಿ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ಸಂಜೆ ಸುಮಾರು 7:30ರ ಸುಮಾರಿಗೆ ಜಸೋಲಾ ವಿಹಾರ್‌ನಲ್ಲಿರುವ ಅಪೋಲೋ ಆಸ್ಪತ್ರೆಗೆ ಅವರನ್ನು ಕರೆತರಲಾಗಿದ್ದು, ತಜ್ಞ ವೈದ್ಯರ ತಂಡ ಅವರ ಆರೋಗ್ಯ ತಪಾಸಣೆ ನಡೆಸುತ್ತಿದೆ.

ಅಡ್ವಾಣಿ ಅವರಿಗೆ ಪ್ರಸ್ತುತ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಆರೋಗ್ಯಕ್ಕೆ ಸಂಬಂಧಿಸಿದ ಅಧಿಕೃತ ವೈದ್ಯಕೀಯ ಬುಲೆಟಿನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಹೇಳಿದೆ.

ಹಲವು ದಶಕಗಳ ಕಾಲ ಭಾರತೀಯ ರಾಜಕಾರಣದಲ್ಲಿ ಮುಂಚೂಣಿಯಲ್ಲಿದ್ದ ಎಲ್.ಕೆ. ಅಡ್ವಾಣಿ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಹಲವು ಬಾರಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, 2002 ರಿಂದ 2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಭಾರತದ ಉಪಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಜನಸಂಘ ಕಾಲದಿಂದಲೂ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಹಾಗೂ ಬಿಜೆಪಿಯನ್ನು ಪ್ರಮುಖ ರಾಷ್ಟ್ರೀಯ ರಾಜಕೀಯ ಶಕ್ತಿಯಾಗಿ ಪರಿವರ್ತಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

You cannot copy content of this page

Exit mobile version