Friday, April 4, 2025

ಸತ್ಯ | ನ್ಯಾಯ |ಧರ್ಮ

ಶಾಸಕ ಪೊನ್ನಣ್ಣ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪ: ಪೊಲೀಸರಿಂದ FIR; ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ನೇಣಿಗೆ ಶರಣು

ಬೆಂಗಳೂರು: ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಾಗವಾರದ ಕಚೇರಿಯಲ್ಲಿಯೇ ವಿನಯ್ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ.

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ವಿನಯ್‌ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ ಅವರನ್ನು ಎರಡು ತಿಂಗಳ ಹಿಂದೆ ವಶಕ್ಕೆ ಪಡೆದಿದ್ದರು. ಬಂಧನದ ನಂತರ ಬಹಳವಾಗಿ ನೊಂದಿದ್ದ ವಿನಯ್‌ ಇಂದು ಬೆಳಗಿನ ಜಾವ 4:30ರ ವೇಳೆ ಸಾವಿಗೆ ಶರಣಾಗಿದ್ದಾರೆ.



ಮ್ಯಾನ್ ಪವರ್ ಸಪ್ಲೈ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿದ್ದ ವಿನಯ್‌ ಅವರಿಗೆ ಮದುವೆಯಾಗಿ ಮಗು ಇದ್ದು ಕುಟುಂಬದೊಂದಿಗೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಾಗಿದ್ದರು.

https://www.facebook.com/share/p/18prv7YZjs/

Related Articles

ಇತ್ತೀಚಿನ ಸುದ್ದಿಗಳು

You cannot copy content of this page