Saturday, August 9, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ ಉದ್ಘಾಟನೆ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ 3 ವರ್ಷ ಪೂರೈಸಿದ ಪ್ರಯುಕ್ತ ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಇಂದು (ಸೆ.10) ಜನಸ್ಪಂದನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಮಗ್ಗ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು.

ಸಚಿವ ಡಾ.ಕೆ.ಸುಧಾಕರ್‌ ಅವರು ಮಾತನಾಡಿ, ನಮ್ಮ ಸರ್ಕಾರದಿಂದ ರೈತಾಪಿ ಮಕ್ಕಳ ಸಬಲೀಕರಣಕ್ಕಾಗಿ ವಿದ್ಯಾರ್ಥಿ ವೇತನವನ್ನು ನೀಡಿದ್ದೇವೆ. ಪ್ರಧಾನಿ ಮೋದಿಜಿ ಕಂಡ ಸ್ವಚ್ಛಾ ಭಾರತ ಅಭಿಯಾನ ಇಡೇರಿಸಲು ರಾಜ್ಯದಲ್ಲಿ ಸುಮಾರು ಹತ್ತು ಕೋಟಿ ಶೌಚಾಲಯವನ್ನು ಕಟ್ಟಿಕೊಟ್ಟಿದ್ದೇವೆ ಎಂದು ಹೇಳಿದರು.

75 ವರ್ಷಗಳ ಅಮೃತ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ 750 ಗ್ರಾಮ ಪಂಚಾಯಿತಿಗಳಲ್ಲಿ 7500 ಸ್ರೀಶಕ್ತಿ ಯೋಜನೆ ಮತ್ತು ಆಯುಷ್ಮಾನ್‌ ಭಾರತ್‌ ಯೋಜನೆಯಡಿಯಲ್ಲಿ 5 ಲಕ್ಷ ರೂ.ಗಳ ಆರೋಗ್ಯ ವಿಮೆಯನ್ನ ತರಲಾಗಿದೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page