Sunday, May 5, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ

ಪುತ್ತೂರು: ಬೆಳ್ಳಾರೆಯಲ್ಲಿ ಮಂಗಳವಾರ ತಡ ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು, ಮಂಗಳವಾರ ರಾತ್ರಿ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ. ಈ ವಿಚಾರವಾಗಿ ಆರೋಪಿಗಳ ಪತ್ತೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳ ಇರುವ ಸುಳಿವಿನ ಮೇರೆಗೆ ಮೂರು ತಂಡಗಳು ಈಗಾಗಲೇ ಕೇರಳ, ಮಡಿಕೇರಿ, ಹಾಸನಕ್ಕೆ ತೆರಳಿವೆ. ಹಾಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ಶೋಧ ಮಾಡಲಾಗುತ್ತಿದೆ ಎಂದು ದಕ್ಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿರುದ್ಧ ಹಿಂದುತ್ವ ಸಂಘಟನೆಗಳು ಪ್ರವೀಣ್ ಮೃತದೇಹವಿದ್ದ ಪುತ್ತೂರಿನ ಖಾಸಗಿ ಆಸ್ಪತ್ರೆಯೆದುರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಮೃತದೇಹದ ಮೆರವಣಿಗೆ ನಡೆಸಲು ಸಂಘ ಪರಿವಾರದ ಸಂಘಟನೆಗಳು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಈ ವಿಚಾರವಾಗಿ ಬೆಳ್ಳಾರೆಗೆ ಭೇಟಿ ನೀಡಿದ ಎಸ್ಪಿ ಪರಿಸ್ಥಿತಿಯ ಅವಲೋಕನ ನಡೆಸಿ, ಬಂದೋಬಸ್ತ್ ವ್ಯವಸ್ಥೆಯನ್ನು ಪರಿಶೀಲಿಸಿದರು.

Related Articles

ಇತ್ತೀಚಿನ ಸುದ್ದಿಗಳು