Sunday, June 16, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿಗೆ ಭ್ರಷ್ಟ ಹಣದ ಮದವೇರಿದೆ: ಕಾಂಗ್ರೆಸ್

ಬೆಂಗಳೂರು : ತೆಲಂಗಾಣದಲ್ಲಿ TRS ಶಾಸಕರನ್ನು ಬಿಜೆಪಿಯವರು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಸಲುವಾಗಿ ಕುದುರೆ ವ್ಯಾಪಾರವನ್ನು ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ  ವಿರುದ್ದ ರಾಜ್ಯ ಕಾಂಗ್ರೆಸ್‌ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ʼತೆಲಂಗಾಣದಲ್ಲಿ ಬಿಜೆಪಿಯ ಕುದುರೆ ವ್ಯಾಪಾರದ ಬಣ್ಣ ಬಯಲಾಗಿದೆ. ಬಿಜೆಪಿಗೆ ಈಗ ಭ್ರಷ್ಟ ಹಣದ ಮದವೇರಿದೆ, ಪ್ರಜಾಪ್ರಭುತ್ವವನ್ನೇ ಖರೀದಿಸಲು ಹೊರಟಿದೆ. ತೆಲಂಗಾಣದ ಆಪರೇಷನ್ ಕಮಲದ ವ್ಯವಹಾರದಲ್ಲಿ ಶಾಸಕರ ಮುಖಂಡತ್ವ ವಹಿಸುವವರಿಗೆ ₹100 ಕೋಟಿ. ಬರುವ ಪ್ರತಿ ಶಾಸಕರಿಗೆ ₹50 ಕೋಟಿ. ಈ ಮೊತ್ತದ ಹಣ ಬಂದಿದ್ದು ಹೇಗೆ?ʼ ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ʼಕರ್ನಾಟಕದಲ್ಲಿ ಶುರುವಾದ ಆಪರೇಷನ್ ಕಮಲ ಎಂಬ ಸೋಂಕು ದೇಶದಾದ್ಯಂತ ಹರಡಿ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ. ದೇಶಾದ್ಯಂತ ಶಾಸಕರನ್ನು ಖರೀದಿಸಲು ಏಳರಿಂದ ಎಂಟು ಸಾವಿರ ಕೋಟಿ ಖರ್ಚು ಮಾಡಿರುವ ಆರೋಪ ಬಿಜೆಪಿ ಮೇಲಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರದ ನಂತರ ಈಗ ತೆಲಂಗಾಣಕ್ಕೆ ಭ್ರಷ್ಟ ಹಣ ತಲುಪಿದೆʼ ಎಂದು ಹೇಳಿದೆ.

ʼಕುರುಡು ಕಾಂಚಾಣ ಕುಣಿಯುತಲಿತ್ತು, ಕಾಲಿಗೆ ಸಿಕ್ಕವರ ತುಳಿಯುತಲಿತ್ತು ಎಂಬ ಬೇಂದ್ರೆಯವರ ಸಾಲಿನಂತೆ ಭ್ರಷ್ಟ ಕಾಂಚಾಣದಿಂದ ಬಿಜೆಪಿಯು ಪ್ರಜಾಪ್ರಭುತ್ವವನ್ನು ಕಾಲಡಿಯಲ್ಲಿ ಹಾಕಿಕೊಂಡು ತುಳಿಯುತ್ತಿದೆ. ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಆಪರೇಷನ್ ಕಮಲ ಎಂಬ ಸೋಂಕು ಕರೋನಾಗಿಂತಲೂ ಅಪಾಯಕಾರಿʼ ಎಂದು ಬಿಜೆಪಿ ವಿರುದ್ದ ಕಿಡಿಕಾರಿದೆ.

Related Articles

ಇತ್ತೀಚಿನ ಸುದ್ದಿಗಳು