Thursday, January 8, 2026

ಸತ್ಯ | ನ್ಯಾಯ |ಧರ್ಮ

ನಕಲಿ ಮತಗಳನ್ನು ಸೃಷ್ಟಿಸುವುದೇ ಬಿಜೆಪಿಯ ಗುರಿ: ಅಖಿಲೇಶ್ ಯಾದವ್ ವಾಗ್ದಾಳಿ

ಉತ್ತರ ಪ್ರದೇಶದಲ್ಲಿ ಮತದಾರರ ಕರಡು ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಟ್ಟಿರುವುದಕ್ಕೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯುಪಿಯಲ್ಲಿ ಸುಮಾರು 2.89 ಕೋಟಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದ್ದು, ಇದರ ಮರೆಯಲ್ಲಿ ಬಿಜೆಪಿ ನಕಲಿ ಮತಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ಜನರಿಗೆ ಮನವಿ ಮಾಡಿದರು. ಬಿಜೆಪಿ ನಾಯಕರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ತಮ್ಮ ಪರವಾಗಿ ಮತದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ಇದು ಮುಂಬರುವ ಚುನಾವಣೆಗಳಲ್ಲಿ ಅಕ್ರಮ ಎಸಗಲು ನಡೆಸುತ್ತಿರುವ ವ್ಯವಸ್ಥಿತ ಸಂಚು ಎಂದು ಅಖಿಲೇಶ್ ಕಿಡಿಕಾರಿದ್ದಾರೆ.

ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಈ ಅಕ್ರಮಗಳನ್ನು ಪ್ರಶ್ನಿಸುವ ಸಮಾಜವಾದಿ ಪಕ್ಷದ ಬೆಂಬಲಿಗರನ್ನು ಗುರಿಯಾಗಿಸಿ ಸರ್ಕಾರ ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಅವರು ದೂರಿದ್ದಾರೆ. ಸಮಾಜದ ಹಿಂದುಳಿದವರು, ದಲಿತರು ಮತ್ತು ಅಲ್ಪಸಂಖ್ಯಾತರ ಮತಗಳನ್ನು ಕಡಿತಗೊಳಿಸಿ ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ತಪ್ಪು ಹಾದಿ ತುಳಿಯುತ್ತಿದೆ ಎಂದು ಅವರು ತೀವ್ರವಾಗಿ ಟೀಕಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page