Friday, April 11, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿಯಿಂದ ʼಭೀಮ ಹೆಜ್ಜೆ 100ʼ ಅಂಬೇಡ್ಕರ್‌ ಕಾರ್ಯಕ್ರಮ: ಇಂದು ನಿಪ್ಪಾಣಿಯಲ್ಲಿ ಉದ್ಘಾಟನೆ

ಬೆಂಗಳೂರು: ಡಾ.ಅಂಬೇಡ್ಕರರ ಜನ್ಮದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ “ಭೀಮ ಹೆಜ್ಜೆ 100” ಎಂಬ ಹೆಸರಿನ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದೆ. ಎಂದು ಸಚಿವ ಪ್ರಲ್ಹಾದ್ ಜೋಶಿ ಅವರು ಹೇಳಿದರು.

ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ವೇಳೆ ತಿಳಿಸುತ್ತೇವೆ ಎಂದು ಘೋಷಿಸಿದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟ ಸಂಗತಿಯನ್ನು ಜನರ ಮುಂದೆ ಇಡುತ್ತೆವೆ. ಜೊತೆಗೆ ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರಕಾರಕ್ಕೆ ಬಾರದಂತೆ ತಡೆದುದನ್ನು ಸಹ ಬಹಿರಂಗಪಡಿಸುತ್ತೇವೆ ಎಂದರು.

ದಲಿತರ ಮೀಸಲಾತಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ವಿರೋಧಿಸಿದ್ದನ್ನು ಜನರ ಮುಂದೆ ತೆರೆದಿಡುತ್ತೇವೆ. ಈಗಲೂ ಖರ್ಗೆಯವರಿಗೆ ಅವಮಾನ ಮಾಡಿದ್ದನ್ನೂ ತಿಳಿಸುತ್ತೇವೆ ಎಂದು ಅವರು ಹೇಳಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮ ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭೇಟಿಯ 100 ವರ್ಷ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಸರಕಾರ ಈ ಕಾರ್ಯಕ್ರಮ ಮಾಡಿದ್ದರೆ ನಾವು ಮಾಡುತ್ತಿರಲಿಲ್ಲ. ಇದು ನಮ್ಮ ಬದ್ಧತೆ ಎಂದು ಜೋಶಿ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page