Thursday, June 20, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಎರಡನೇ ಪಟ್ಟಿ ರಿಲೀಸ್:‌ ಟಿಕೆಟ್‌ ತಪ್ಪಿಸಿಕೊಂಡ ಪ್ರತಾಪ್‌ ಸಿಂಹ, ಸದಾನಂದ ಗೌಡ, ನಳಿನ್

ದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು ಇದರಲ್ಲಿ ಶೋಭಾ ಕರಂದ್ಲಾಜೆ ಟಿಕೆಟ್‌ ಸ್ಥಳಾಂತರಗೊಂಡಿದ್ದರೆ, ಪ್ರತಾಪ್‌ ಸಿಂಹ, ಸದಾನಂದ ಗೌಡ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ವಿಧಾನ ಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಆಯ್ಕೆ ಮಾಡಿದ್ದರೆ, ಮೈಸೂರು ಕ್ಷೇತ್ರಕ್ಕೆ ಯದುವೀರ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಹಲವು ನಾಟಕೀಯ ಬೆಳವಣಿಗೆಗಳ ನಂತರವೂ ಪ್ರತಾಪ್‌ ಸಿಂಹ ಟಿಕೆಟ್‌ ತಪ್ಪಿಸಿಕೊಂಡಿದ್ದಾರೆ. ಸದಾನಂದ ಗೌಡ ಕೂಡಾ ಈ ದಿನ ಮಧ್ಯಾಹ್ನವೇ ಟಿಕೆಟ್‌ ಸಿಗದಿರುವ ಸೂಚನೆ ಕೊಟ್ಟಿದ್ದರು. ಇನ್ನು ಮಂಗಳೂರಿನಿಂದ ನಳಿನ್‌ ಕುಮಾರ್‌ ಕಟೀಲ್‌ ಕೂಡಾ ಟಿಕೆಟ್‌ ತಪ್ಪಿಸಿಕೊಂಡಿದ್ದು ಅವರ ಬದಲಿಗೆ ಕ್ಯಾ. ಬೃಜೇಶ್‌ ಚೌಟ ಅವರಿಗೆ ಟಿಕೇಟ್‌ ನೀಡಲಾಗಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ ಎನ್‌ ಮಂಜುನಾಥ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಇಲ್ಲಿ ಕಾಂಗ್ರೆಸ್ಸಿನಿಂದ ಡಿಕೆ ಸುರೇಶ್‌ ಸ್ಪರ್ಧಿಸಲಿದ್ದಾರೆ.

ತುಮಕೂರು ಕ್ಷೇತ್ರದಿಂದ ಸೋಮಣ್ಣ ಕಣಕ್ಕಿಳಿದರೆ ಹಾವೇರಿಯಿಂದ ಮಾಜಿ ಮುಖ್ಯಮಂತ್ರಿ ಸೋಮಣ್ಣ ಕಣಕ್ಕಿಳಿಯಲಿದ್ದಾರೆ.

ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ:

ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

ಬಿಜೆಪಿಯ 9 ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ನಳಿನ್ ಕುಮಾರ್‌ ಕಟೀಲ್‌ಗೆ ದಕ್ಷಿಣ ಕನ್ನಡ, ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್‌ ಸಿಂಹ, ಕೊಪ್ಪಳದಿಂದ ಕರಡಿ ಸಂಗಣ್ಣ, ಬೆಂಗಳೂರು ಉತ್ತರದಿಂದ ಸದಾನಂದ ಗೌಡ, ಬಳ್ಳಾರಿಯಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದ್ದರೆ, ಚಾಮರಾಜನಗರದಲ್ಲಿ ಶ್ರೀನಿವಾಸ್‌ ಪ್ರಸಾದ್‌, ಹಾವೇರಿಯಲ್ಲಿ ಸಿಎಂ ಉದಾಸಿ, ತುಮಕೂರಿನಲ್ಲಿ ಜಿಎಸ್‌ ಬಸವರಾಜ್‌ ಹಾಗೂ ದಾವಣಗೆರೆಯಲ್ಲಿ ಜಿಎಂ ಸಿದ್ಧೇಶ್ವರ ನಿವೃತ್ತಿ ಘೋಷಣೆ ಮಾಡಿರುವ ಕಾರಣ ಬೇರೆಯವರಿಗೆ ಟಿಕೆಟ್‌ ನೀಡಲಾಗಿದೆ.

ಎರಡನೇ ಪಟ್ಟಿಯಲ್ಲಿ ಪೂರ್ತಿ ವಿವರಗಳಿಗಾಗಿ ಕೆಳಗಿನ ಟ್ವೀಟ್‌ ನೋಡಿ:

Related Articles

ಇತ್ತೀಚಿನ ಸುದ್ದಿಗಳು