ಚಿಕ್ಕೋಡಿ: ಮರಾಠಿ ಭಾಷಿಕರು ಕೆ ಎಸ್ ಆರ್ ಟಿ ಸಿ ( ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಬಸ್ಸಿಗೆ ಕಪ್ಪು ಮಸಿ ಬಳಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಬಸವರಾಜ ಬೊಮ್ಮಾಯಿಯವರು ಕೆಲವು ದಿನಗಳ ಹಿಂದೆ, ಮಹರಾಷ್ಟ್ರ ರಾಜ್ಯದಲ್ಲಿನ ಜತ್ ತಲ್ಲೂಕಿನಲ್ಲಿರುವ 40 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕೆಂದು ನಿರ್ಣಯ ಮಾಡಿದ್ದೇವೆ ಎಂದು ಹೇಳಿದ್ದರು, ಈ ಹೇಳಿಕೆಗೆ ಅಖಿಲ ಭಾರತೀಯ ಮರಾಠ ಸಂಘದ ಕಾರ್ಯಕರ್ತರು, ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿಗೆ (ಕೆ ಎಸ್ ಆರ್ ಟಿ ಸಿ) ಮಸಿ ಬಡಿದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದರ್,ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ.