Friday, July 4, 2025

ಸತ್ಯ | ನ್ಯಾಯ |ಧರ್ಮ

ಇಂದಿನಿಂದ ‘Bengaluru -mysore express way’ಯಲ್ಲಿ ಟ್ಯಾಕ್ಟರ್, ಬೈಕ್, ಆಟೋಸಂಚಾರ ನಿಷೇಧ – 500 ದಂಡ

ರಾಮನಗರ : ಆಗಸ್ಟ್​ 1ರ ಇಂದಿನಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ದಶಪಥ ಹೆದ್ದಾರಿಯಲ್ಲಿ 80 – 100 ಕಿಲೋಮೀಟರ್ ವರೆಗೆ ವೇಗಮಿತಿಯಲ್ಲಿ ಚಲಿಸಲು ಅವಕಾಶ ಇರುವುದರಿಂದ ಅಪಘಾತ ತಡೆಯುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರ ಈ‌ ಕ್ರಮಕ್ಕೆ ಮುಂದಾಗಿದೆ.

ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಈ ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1ರ ಇಂದಿನಿಂದ ಜಾರಿಗೆ ಬರುವಂತೆ ದ್ವಿಚಕ್ರ ಹಾಗೂ ಮೂರು ಚಕ್ರದ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆಯಾದಾಗಿನಿಂದಲೂ ಈ ಬಗ್ಗೆ ಚರ್ಚೆಗಳು ಏರ್ಪಟ್ಟಿದ್ದವು. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೆಲವು ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಆಮೂಲಕ ನೂತನ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ತಡೆಯೊಡ್ಡಲು ಮುಂದಾಗಿದೆ ಎಂದು ಸೂಚಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page