Saturday, November 22, 2025

ಸತ್ಯ | ನ್ಯಾಯ |ಧರ್ಮ

ಬ್ಲೂಫಿಲಂ ತೋರಿಸಿದ್ದು ಸಾಭೀತುಪಡಿಸಿದರೆ ರಾಜಕೀಯ ನಿವೃತ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

ಕನಕಪುರ ಹಾಗೂ ತನ್ನ ಹುಟ್ಟೂರು ದೊಡ್ಡಾಲಹಳ್ಳಿ ಸುತ್ತಮುತ್ತ ನಾನು ಬ್ಲೂಫಿಲಂ ತೋರಿಸಿದ್ದೆ ಎಂಬುದನ್ನು ಸಾಭೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಕೆಲವು ಸಮಯದ ಹಿಂದೆ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣಗಳಲ್ಲಿ ಡಿ.ಕೆ.ಶಿವಕುಮಾರ್ ಅವರ ಮೇಲೆ, ಟೆಂಟ್ ನಲ್ಲಿ ಬ್ಲೂಫಿಲಂ ತೋರಿಸಿದ ಆರೋಪ ಹೊರಿಸಿತ್ತು. ಆಗೆಲ್ಲಾ ಬಿಜೆಪಿಯವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲ ಎಂದು ಡಿ.ಕೆ.ಶಿವಕುಮಾರ್ ನಿರ್ಲಕ್ಷ್ಯದ ಧೋರಣೆ ತೋರಿದ್ದರು. ಅಷ್ಟೆ ಅಲ್ಲದೆ ಇದು ಬಿಜೆಪಿ ಪಕ್ಷದ ಕೀಳು ಮಟ್ಟದ ಪ್ರಚಾರ ಎಂದು ದೂರಿದ್ದರು.

ಆದರೆ ಈಗ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಡಿ.ಕೆ.ಶಿವಕುಮಾರ್ ಮೇಲೆ ಈ ರೀತಿಯ ಮಾತನ್ನಾಡಿದ ಕಾರಣ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ‘ಇವರೆಲ್ಲಾ ಬ್ಲೂಫಿಲಂ ತೋರಿಸಿ ಮೇಲೆ ಬಂದವರು’ ಎಂದು ಕೆಲವೇ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ನಾನು ಬ್ಲೂಫಿಲಂ ತೋರಿಸಿದ್ದನ್ನು ಸಾಬೀತು ಮಾಡಿದರೇ ರಾಜಕೀಯದಿಂದ ನಿವೃತ್ತಿಯಾಗುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ದೊಡ್ಡ ಆಲಹಳ್ಳಿ ಸುತ್ತಮುತ್ತ ಯಾವನಾದರೂ ಒಬ್ಬ ನಾನು ಬ್ಲೂ ಫಿಲಂ ತೋರಿಸಿದ್ದೀನಿ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಕುಮಾರಸ್ವಾಮಿ ಕನಕಪುರಕ್ಕೆ ಬರಲಿ, ಬ್ಲೂ ಫಿಲಂ ಬಗ್ಗೆ ಮಾತಾಡಲಿ. ಲೋಕಸಭೆ ಚುನಾವಣೆಯಲ್ಲಿ ಗೊತ್ತಾಗುತ್ತೆ. ವಿಧಾನಸಭೆ ಚುನಾವಣೆಯಲ್ಲಿ ಕನಕಪುರಕ್ಕೆ ಬಂದು ಕುಮಾರಸ್ವಾಮಿ ಪ್ರಚಾರ ಮಾಡಿಲ್ಲ‌. ಬಂದು ಬ್ಲೂ ಫಿಲಂ ಬಗ್ಗೆ ಹೇಳಬೇಕಿತ್ತು, ಆಗ ಗೊತ್ತಾಗೋದು ಎಂದು ತಿರುಗೇಟು ಕೊಟ್ಟಿದ್ದಾರೆ.

“ನನಗೆ ಯಾರ್ ಬ್ರೇಕ್ ಹಾಕ್ತಾರೆ ರೀ, ಪ್ರಕೃತಿ ನಿಯಮ ಇದೆ. ನನಗೆ ಯಾರು ಬ್ರೇಕ್ ಗೀಕ್ ಹಾಕಲ್ಲ. ಕೆಲವರು ಲಿಮಿಟೇಶನ್ ದಾಟುತ್ತಾರೆ ಅಷ್ಟೇ. ಕುಮಾರಸ್ವಾಮಿ ಜೊತೆ ಗುದ್ದಾಟಕ್ಕೆ ನನಗೆ ಟೈಂ ಇಲ್ಲ. ಅಯ್ಯೋ ಪಾಪ ಅವರಿಗೆ ಪ್ರಾಬ್ಲಂ ಇದೆ. ಈಗಲೂ 21 ಥಿಯೇಟರ್ ಇವೆ. ನಮ್ಮದು ಎಲ್ಲಾದ್ರೂ ಉಂಟೇನ್ರಿ..” ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ದೊಡ್ಡ ಆಲಹಳ್ಳಿ, ಕೋಡಹಳ್ಳಿ, ಸಾತನೂರಿನಲ್ಲಿ ಹೋಗಿ ಜನರನ್ನ ಕೇಳಿ. ಒಬ್ಬ ಏನಾದ್ರೂ ಡಿಕೆಶಿ ಬ್ಲೂ ಫಿಲ್ಮ್ ತೋರಿಸ್ತಿದ್ದ ಅಂದ್ರೆ ನಾನು ರಾಜಕೀಯ ನಿವೃತ್ತಿ ತಗೋತೀನಿ ಎಂದು ತಿರುಗೇಟು ಕೊಟ್ಟರು

Related Articles

ಇತ್ತೀಚಿನ ಸುದ್ದಿಗಳು

You cannot copy content of this page