Friday, January 2, 2026

ಸತ್ಯ | ನ್ಯಾಯ |ಧರ್ಮ

ಬೊಲೆರೋ ಟೈರ್ ಸಿಡಿದು ಪಲ್ಟಿ – ಮೂವರ ದುರ್ಮರಣ

ಹಾಸನ : ಜಿಲೆಯ ಅರಸೀಕೆರೆ ತಾಲೂಕಿನ ಬಾಣಾವಾರ ಬಳಿಯ ಚಿಕ್ಕಾರಹಳ್ಳಿ ಗೋಶಾಲೆ ಬಳಿ ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿ  ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೊಸ ವರ್ಷದ ಮೊದಲ‌ ದಿನವೇ ಹಾಸನ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಓರ್ವನಿಗೆ ಗಂಭೀರ ಗಾಯ, ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ, ತಂಗ್ಲಿ ಗ್ರಾಮದ ಶಬ್ಬೀರ್ (55), ತಿಮ್ಮಣ್ಣ (53), ಸಂಜಯ್ (45) ಮೃತ ಪಟ್ಟಿದ್ದಾರೆ. ಅಲ್ಲದೇ ಹಾಸನ ಮೂಲದ ನೌಶದ್ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕಡೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page