Home ರಾಜ್ಯ ಮೈಸೂರು ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

0
ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕಾನೂನು ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನವೆಂಬರ್ 10: ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದರು.

ಮೃತರ ಕುಟುಂಬದ ವರ್ಗದವರಿಗೆ ಸಂತಾಪ
ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

You cannot copy content of this page

Exit mobile version