Monday, March 9, 2026

ಸತ್ಯ | ನ್ಯಾಯ |ಧರ್ಮ

ಮಾರಕಾಸ್ತ್ರಗಳಿಂದ ದಾಳಿ, ಸಹಪಾಠಿಯ ಕೊಂದ ಬಾಲಕ

ಬಳ್ಳಾರಿ: ನಗರದ ತಾಳೂರು ರಸ್ತೆಯಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ದಾಳಿ ಮಾಡಿದ್ದು, ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟು, ಬಾಲಕಿ ಸೇರಿ ಏಳು ಮಕ್ಕಳು ಗಾಯಗೊಂಡಿದ್ದಾರೆ. ಒಂಬತ್ತನೇ ತರಗತಿ ವಿದ್ಯಾರ್ಥಿ, ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಸಮ್ಮತಗೇರಿ ಗ್ರಾಮದ ಡಿ.ಹೇಮಂತ್ ಮೃತಪಟ್ಟ ಬಾಲಕ. ಗಾಯಗೊಂಡವರ ಪೈಕಿ ಒಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಎಲ್ಲರೂ ಬಳ್ಳಾರಿಯ ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ವಿವಿಧ ತರಗತಿಗಳಲ್ಲಿ ಓದುತ್ತಿದ್ದಾರೆ. 

ದಾಳಿ ಮಾಡಿದ ಬಾಲಕ ಬಳ್ಳಾರಿಯ ಗೋನಾಳು ಗ್ರಾಮದವನಾಗಿದ್ದು, ಘಟನೆ ಬಳಿಕ ಪರಾರಿಯಾಗಿದ್ದಾನೆ. ರಾಡ್‌, ಚಾಕು, ತೆಂಗಿನಕಾಯಿ ಸುಲಿಯುವ ಸಾಧನದಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. 

‘ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ಎಲ್ಲರೂ ಊಟ ಮುಗಿಸಿದ್ದರು. ಹೇಮಂತ್‌, ಆರೋಪಿ ಬಾಲಕ ಮತ್ತು ಮತ್ತು ಇತರ ಇಬ್ಬರು ವಿದ್ಯಾರ್ಥಿಗಳು ಒಂದೇ ಕಡೆ ಮಲಗಿದ್ದರು. ರಾತ್ರಿ 10.15ರ ಸುಮಾರಿಗೆ ಆರೋಪಿ ಏಕಾಏಕಿ ದಾಳಿ ನಡೆಸಿದ್ದಾನೆ. ಅಡ್ಡ ಬಂದ ವಾರ್ಡನ್‌ ಬ್ಲೆಸಿ ಅವರ ಮೇಲೂ ಹಲ್ಲೆ ನಡೆಸಿದ್ದಾನೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

Related Articles

ಇತ್ತೀಚಿನ ಸುದ್ದಿಗಳು

You cannot copy content of this page