ಒಳ್ಳೆಯ ರ್ಯಾಂಕ್ ವಿದ್ಯಾರ್ಥಿ, ಸ್ಪುರದ್ರೂಪಿಯಾಗಿದ್ದರೂ ಜೀವನದಲ್ಲಿ ತಪ್ಪು ಹೆಜ್ಜೆ ಇಟ್ಟು ತನ್ನ ಬದುಕನ್ನು ಅಂತ್ಯಗೊಳಿಸಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನ ಮೃತದೇಹ ತುಂಗಾನದಿಯಲ್ಲಿ ಪತ್ತೆಯಾಗಿದೆ.
ಆದರೆ ಯುವಕನ ಸಾವಿಗೆ ಕಾರಣವಾದ ಅಂಶಗಳು ತೀರಾ ಮೂರ್ಖತನದಿಂದ ಕೂಡಿದ್ದು, ಇಷ್ಟು ಚಿಕ್ಕ ವಯಸ್ಸಿಗೆ ಆತ್ಮಹತ್ಯೆಯಂತಾ ನಿರ್ಧಾರಕ್ಕೆ ಬಂದದ್ದು ಆತನ ಸಾವಿಗೆ ಮರುಗಬೇಕೋ ಅಥವಾ ಇಂತಾ ಕೆಟ್ಟ ನಿರ್ಧಾರಕ್ಕೆ ದೂಷಿಸಬೇಕೋ ತಿಳಿಯದಾಗಿದೆ.
ಅಂದಹಾಗೆ ಆ ಯುವಕನ ಹೆಸರು ಜಯದೀಪ್ (24 ವರ್ಷ). ರ್ಯಾಂಕ್ ಸ್ಟೂಡೆಂಟ್. ಎರಡು ದಿನಗಳ ಹಿಂದೆ ಜೀವನದಲ್ಲಿ ಜಿಗುಪ್ಸೆ ಬಂದು ಸಾವಿನ ಹಾದಿ ಹಿಡಿಯುತ್ತಿದ್ದೇನೆ ಎಂದು ವಾಟ್ಸಪ್ ಸ್ಟೇಟಸ್ ಹಾಕಿ ಕಣ್ಮರೆಯಾಗಿದ್ದಾನೆ. ಆತನ ಬೈಕ್ ತುಂಗಾ ನದಿಯ ದಡದಲ್ಲಿ ಸಿಕ್ಕಿದೆ.
ಆತ್ಮಹತ್ಯೆಯ ಅನುಮಾನ ದಟ್ಟವಾಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯೋನ್ಮುಖರಾಗಿ ಆತನ ಹುಡುಕಾಟಕ್ಕೆ ತುಂಗೆಯ ಒಡಲು ತಡಕಾಡಿದ್ದಾರೆ. ತೀರ್ಥಹಳ್ಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಯುವಕನ ಹುಡುಕಲು ಸ್ವಲ್ಪ ಕಷ್ಟವಾಗಿದೆ. ಆದರೆ ಸೋಮವಾರ ಮಧ್ಯಾಹ್ನದ ವೇಳೆಗೆ ಯುವಕನ ಮೃತದೇಹ ಸಿಕ್ಕಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢವಾಗಿದೆ.
ವಾಟ್ಸಪ್ ಸ್ಟೇಟಸ್ ನಲ್ಲಿ ಏನಿತ್ತು?
ಇನ್ನು ಸ್ವಲ್ಪ ದಿನದಲ್ಲಿ ಡಿಗ್ರಿ ಮುಗಿಯುತ್ತಿತ್ತು.ನಾನು ಒಳ್ಳೆಯ ವಿದ್ಯಾರ್ಥಿ ಸಹ,ಬ್ಯಾಂಕ್ ಬರುವ ಚಾನ್ಸ್ ಕೂಡ ಇತ್ತು.ಆದರೆ ಅದು ನೆನಪು ಮಾತ್ರ. ಅಪ್ಪ ಅಮ್ಮ ಸಂಜಯ್ ನನ್ನನ್ನು ಕ್ಷಮಿಸಿ ಬಿಡಿ ನಿಮ್ಮ ಆಸೆ ನಂಬಿಕೆ ಎಲ್ಲಾ ಹಾಳು ಮಾಡುತ್ತಿದ್ದೀನಿ ಅಂತ ಬೇಜಾರಾಗಬೇಡಿ, ನನ್ನ ಸಾಲ ನಿಮ್ಮ ಮೇಲೆ ಹಾಕುತಿದ್ದೀನಿ ಅಂತ ಸಿಟ್ಟು ಮಾಡಿಕೊಳ್ಳಬೇಡಿ ನನ್ನ ಬೈಕ್ ಮಾರಿ ಸ್ವಲ್ಪ ಅಡ್ಡಸ್ಟ್ ಮಾಡಿ ಎಲ್ಲರಿಗೂ ಕೊಡಿ
ನನ್ನ ಜೀವನನೇ ಒಂದು ರೀತಿಯ ಉಪ್ಪಿಲ್ಲದ ಊಟದ ರೀತಿ,ಸುಮಾರು 3 ವರ್ಷದಿಂದ ಆಗಿದೆ. ನನ್ನ ಜೀವನದಲ್ಲಿ ವಯಸ್ಸು 24 ಆದರೂ ಹುಡುಗಿ ಅಂತ ಇಲ್ಲ, ಸಣ್ಣ ಸಣ್ಣ ಹುಡುಗರಿಗೆಲ್ಲಾ ಲವರ್ ಇದ್ರೂ ನನಗೆ ಇಲ್ಲ ಅನ್ನೋ ಬೇಜಾರು, ಒನ್ ಸೈಡ್ ನಾನು ಲವ್ ಮಾಡಿದ್ದೆ ಅವಳು ಒಪ್ಪಿಲ್ಲ. ಒಂದು ಸಣ್ಣ ತಪ್ಪು ಇವತ್ತು ನನ್ನ ಸಾವಿನ ಕಡೆ ತಳ್ಳುತ್ತಿದೆ. ಒಳ್ಳೆ ಕೆಲಸ ಹುಡುಕುವುದರಲ್ಲೂ ವಿಫಲನಾದೆ ಇತ್ತೀಚಿನ ದಿನಗಳಲ್ಲಿ ಬರಿ ಸಾಲ, ಮಾನಸಿಕ ಖಿನ್ನತೆ ನನ್ನ ಎಲ್ಲಾದರೂ ದೂರ ಹೋಗುವಂತೆ ಪ್ರೇರೇಪಿಸಿತು. ಊರು ಬಿಡೋಣ ಅಂತ ಮಾಡಿದೆ ಆದರೆ ಊರು ಬಿಡೊದಕ್ಕಿಂತ ಸಾವೇ ಮುನ್ನುಗ್ಗಿ ಕರೆಯಿತು. ಎಲ್ಲರಿಗೂ ಸಾರೀ ಫೀಸ್ ಕ್ಷಮಿಸಿ ಬಿಡಿ ನನ್ನ ಸಾವಿಗೆ ನನ್ನ ಕೆಟ್ಟ ನಿರ್ಧಾರಗಳೇ ಕಾರಣ ಎಂದು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಾರೆ.
ಹುಡುಗಿ ಸಿಕ್ಕಿಲ್ಲ ಎಂಬ ಕ್ಷುಲ್ಲಕ ಕಾರಣ ಮತ್ತು ಅಲ್ಪಮೊತ್ತದ ಸಾಲದ ಕಾರಣ ಬಾಳಿ ಬದುಕಬೇಕಾದ ಹುಡುಗನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.