ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ 3 ವರ್ಷ ಪೂರೈಸಿರುವ ಸಂತಸದಲ್ಲಿ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾಚಣೆಯಲ್ಲಿ 150 ಸೀಟ್‌ಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರದಲ್ಲಿ ಭ್ರಷ್ಟಚಾರವಿದೆ ಎಂದು ಹೇಳುತ್ತಿದ್ದಾರೆ, ಆದರೆ ರಾಜ್ಯದಲ್ಲಿ ಭ್ರಷ್ಟಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದ ಕೇಂದ್ರದಲ್ಲಿನ ಸೋನಿಯ ಗಾಂಧಿ, ರಾಹುಲ್ ಗಾಂಧಿ ಇಂದ ಹಿಡಿದು ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ವರೆಗೆ ಎಲ್ಲರು ಅಪರಾಧಿಗಳು ಮತ್ತು ಭ್ರಷ್ಟತೆಯುಳ್ಳವರು. ಇವರುಗಳು ಕೋರ್ಟ್‌ನ ಬೇಲ್ ಮೇಲೆ ಹೊರಗಿದ್ದಾರೆ. ನಿಮ್ಮ ಕಾಂಗ್ರೆಸ್ ಸರ್ಕಾರ 100% ಭ್ರಷ್ಟತೆಯ ಸರ್ಕಾರ ಎಂದು ಗುಡುಗಿದರು.