Tuesday, September 23, 2025

ಸತ್ಯ | ನ್ಯಾಯ |ಧರ್ಮ

Breaking news: ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಸಲ್ಲಿಕೆ

ವರದಿ ಸ್ವೀಕಾರಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಅಕ್ಟೋಬರ್ 29:-
ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯ ಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು.

ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ
ಶಾಸಕರು 30 ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿ ಎಲ್ಲಾ ಶಾಸಕರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page