Sunday, June 16, 2024

ಸತ್ಯ | ನ್ಯಾಯ |ಧರ್ಮ

Breaking News: ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಧೀಶರಾಗಿ ನ್ಯಾ.ಪಿ.ಬಿ.ವರಾಳೆ ನೇಮಕ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಧೀಶರಾಗಿ ನ್ಯಾ.ಪಿ.ಬಿ. ವರಾಳೆ (ಪ್ರಸನ್ನ ಬಿ. ವರಳೆ) ಅವರನ್ನು ನೇಮಕ ಮಾಡಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಋತುರಾಜ್ ಅವಸ್ಥಿ ಅವರ ನಿವೃತ್ತಿ ನಂತರ ಹುದ್ದೆ ಖಾಲಿ ಇತ್ತು.

ಮಂಗಳವಾರ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್‌ 30ರಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಕೊಲಿಜಿಯಂ ಸಭೆ, ನ್ಯಾಯಮೂರ್ತಿ ಪಿ. ಬಿ. ವರಳೆ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿತ್ತು.

ಪಿ. ಬಿ. ವರಳೆ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು