ಹಾಸನಾಂಬ ಜಾತ್ರೆಗೆ 18 ಲಕ್ಷ ಭಕ್ತರ ಆಗಮನ, 17 ಕೋಟಿ ರೂ. ಆದಾಯ – ಸಚಿವ ಶಿವಲಿಂಗೇಗೌಡ
ಲಿಂಕ್ ನಕಲಿಸಲಾಗಿದೆ ✓
ಹಾಸನ: ಹಾಸನ ಮಹಾನಗರಪಾಲಿಕೆ ವಸ್ತು ಪ್ರದರ್ಶನದ ಮೈದಾನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಹಾಸನಾಂಬ ಜಾತ್ರಾ ಮಹೋತ್ಸವದ ಯಶಸ್ಸಿನ ಕುರಿತು ಸಂತಸ ವ್ಯಕ್ತಪಡಿಸಿದರು.
ಮೂವತ್ತು ವರ್ಷಗಳ ಹಿಂದೆ ವಸ್ತು ಪ್ರದರ್ಶನ ನಡೆಯುತ್ತಿದ್ದ ಈ ಮೈದಾನ ಕಸದ ತೊಟ್ಟಿಯಾಗಿತ್ತು. ಅದನ್ನು ಸ್ವಚ್ಛಗೊಳಿಸಿ ಕಾರ್ಯಕ್ರಮ ಹಾಗೂ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಇದೇ ಮೊದಲ ಬಾರಿಗೆ ಐತಿಹಾಸಿಕ ಕ್ರೀಡೆಗಳನ್ನು ಆಯೋಜಿಸಿರುವುದು ವಿಶೇಷ ಎಂದರು.
Read More:
ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ 18 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಸುಮಾರು 17 ಕೋಟಿ ರೂಪಾಯಿ ಆದಾಯ ಬಂದಿದೆ. ಹಾಸನಾಂಬ ಜಾತ್ರಾ ಮಹೋತ್ಸವ ಹಾಸನಕ್ಕೆ ಕೀರ್ತಿ ತಂದಿದೆ. ಹಂಪಿ ಉತ್ಸವ ಹಾಗೂ ಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ಜಾತ್ರೆ ನಡೆಯುತ್ತಿದೆ. ಇದು ನಮ್ಮ ಸನಾತನ ಧರ್ಮವನ್ನು ಎತ್ತಿ ಹಿಡಿಯುವ ಹಬ್ಬವಾಗಿದೆ ಎಂದು ಹೇಳಿದರು.
ಮುಂದಿನ ವರ್ಷ ರೈತರಿಗಾಗಿಯೇ ವಿಶೇಷ ವಸ್ತು ಪ್ರದರ್ಶನ ಆಯೋಜಿಸಲಾಗುವುದು. ಮೈಸೂರು ದಸರಾ ಮಾದರಿಯಲ್ಲಿ ಹಾಸನದಲ್ಲೂ ಅದ್ಧೂರಿ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ