ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

19 ವರ್ಷದ ಯುವತಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ – ತೀವ್ರ ಅನುಮಾನ ತನಿಖೆ ಚುರುಕು

19 ವರ್ಷದ ಯುವತಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ – ತೀವ್ರ ಅನುಮಾನ ತನಿಖೆ ಚುರುಕು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ನಗರದ ಅಂಬಿಕಾ ನಗರದಲ್ಲಿ 19 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ ಸಾವಿನ ಸುತ್ತ ತೀವ್ರ ಅನುಮಾನಗಳ ಹುತ್ತು ನಿರ್ಮಾಣವಾಗಿದ್ದು, ಪೋಷಕರು ಪ್ರಕರದ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಮೃತರನ್ನು ಸಾಕಮ್ಮ ಹಾಗೂ ಮಂಜಶೆಟ್ಟಿ ದಂಪತಿಯ ಪುತ್ರಿ ರಚಿತಾ (19) ಎಂದು ಗುರುತಿಸಲಾಗಿದೆ. ಈಕೆ ಪ್ರಥಮ ವರ್ಷದ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದಳು.

ಘಟನೆಯ ಹಿನ್ನೆಲೆ ಹಾಗೂ ಪ್ರೀತಿ-ಪ್ರಕರಣ:

ಮೃತ ರಚಿತಾ ಕಳೆದ ಒಂದೂವರೆ ವರ್ಷದಿಂದ ನವೀನ್‌ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ನವೀನ್‌ ಚನ್ನರಾಯಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಐಡಿಯಲ್ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ವಿಶೇಷವೆಂದರೆ, ಇದೇ ಬೇಕರಿಯಲ್ಲಿ ರಚಿತಾ ಅವರ ತಾಯಿ ಸಾಕಮ್ಮ ಕೂಡ ಕೆಲಸ ಮಾಡುತ್ತಿದ್ದರು.

ಇಬ್ಬರು ಪರಸ್ಪರ ಪ್ರೀತಿಸುತ್ತಿರುವ ವಿಚಾರವನ್ನು ರಚಿತಾ ಹಾಗೂ ನವೀನ್ ಇಬ್ಬರೂ ಸೇರಿ ತಾಯಿ ಸಾಕಮ್ಮ ಅವರ ಬಳಿ ಹೇಳಿಕೊಂಡಿದ್ದರು. ಈ ವೇಳೆ ಸಾಕಮ್ಮ ಅವರು ಇಬ್ಬರಿಗೂ ಮದುವೆ ಮಾಡಿಸುವುದಾಗಿ ಭರವಸೆ ನೀಡಿದ್ದರು ಎಂದು ತಿಳಿದುಬಂದಿದೆ.

ಪೋಷಕರ ಗಂಭೀರ ಆರೋಪ:

ಮದುವೆಯ ಮಾತುಕತೆ ನಡುವೆಯೂ ಇತ್ತೀಚಿನ ದಿನಗಳಲ್ಲಿ ಪ್ರೇಮಿ ನವೀನ್‌ ತನ್ನ ಮಗಳಿಗೆ ತೀವ್ರ ಕಿರುಕುಳ ನೀಡುತ್ತಿದ್ದನು ಎಂದು ತಾಯಿ ಸಾಕಮ್ಮ ಆರೋಪಿಸಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ರಚಿತಾ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ. ನವೀನ್‌ನ ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ತನಿಖೆ:

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR – ಅಸಾಮಾನ್ಯ ಸಾವು) ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು