ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರು ವಾರ್ಡ್ ರಸ್ತೆಗಳಿಗೆ ₹2,000 ಕೋಟಿ: ಆರು ತಿಂಗಳಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವ ಗುರಿ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಬೆಂಗಳೂರು ವಾರ್ಡ್ ರಸ್ತೆಗಳಿಗೆ ₹2,000 ಕೋಟಿ: ಆರು ತಿಂಗಳಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವ ಗುರಿ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರದೇಶದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ₹2,000 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನಗರದ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಳ್ಳುತ್ತಿದ್ದು, ವಾರ್ಡ್ ಮಟ್ಟದ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗಿದೆ. ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳನ್ನು ಹೊರತುಪಡಿಸಿ, ಜನಸಾಮಾನ್ಯರು ಪ್ರತಿದಿನ ಬಳಸುವ ಒಳರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವರು ಹೇಳಿದರು.

ಐದು ನಗರ ಪಾಲಿಕೆಗಳ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿರುವ ಹಾಳಾದ ರಸ್ತೆಗಳನ್ನು ಗುರುತಿಸಿ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ಬಳಿಕ ತ್ವರಿತ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳನ್ನು ಆರಂಭಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಮುಂದಿನ ಎರಡು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಮುಗಿಸಿ, ನಾಲ್ಕರಿಂದ ಆರು ತಿಂಗಳ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಮಳೆಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳ ವೇಳಾಪಟ್ಟಿ ರೂಪಿಸಲಾಗುತ್ತಿದ್ದು, ಗುಣಮಟ್ಟಕ್ಕೆ ಯಾವುದೇ ಧಕ್ಕೆಯಾಗದಂತೆ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆ ನಿರ್ಮಾಣ ಮತ್ತು ಡಾಂಬರೀಕರಣ ಸಂದರ್ಭದಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲಾಗುವುದು. ರಸ್ತೆ ಅಭಿವೃದ್ಧಿಯ ನಂತರ ಪೂರ್ವಾನುಮತಿ ಇಲ್ಲದೆ ರಸ್ತೆ ಅಗೆಯುವ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಗಳನ್ನು ನಡೆಸಲಾಗುವುದು. ಅಧಿಕಾರಿಗಳು ನಿಯಮಿತವಾಗಿ ಕಾಮಗಾರಿ ಪರಿಶೀಲಿಸಿ ನಿಗದಿತ ಅವಧಿಯೊಳಗೆ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಬೆಂಗಳೂರಿನ ರಸ್ತೆ ವ್ಯವಸ್ಥೆಯನ್ನು ಸುಧಾರಿಸಿ ಸಾರ್ವಜನಿಕರ ನಿರೀಕ್ಷೆಗೆ ತಕ್ಕ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು