ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದೆ, ರೈತರನ್ನು ರಕ್ಷಿಸೋಣ – DCM ಪರಮೇಶ್ವರ್

ರಾಜ್ಯದಲ್ಲಿ ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದೆ, ರೈತರನ್ನು ರಕ್ಷಿಸೋಣ – DCM ಪರಮೇಶ್ವರ್

ಬಳ್ಳಾರಿ: ಕರ್ನಾಟಕು ಕಳೆದ ಸುಮಾರು 75 ವರ್ಷಗಳಲ್ಲಿಯೇ ಅತ್ಯಂತ ಭೀಕರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಸುಮಾರು ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದ್ದು, ಈ ಸಂಕಷ್ಟದಿಂದ ರೈತರನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಬುಧವಾರ ತಿಳಿಸಿದರು.ರಾಜ್ಯದ ಒಟ್ಟು 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ 23 ತಾಲೂಕುಗಳಲ್ಲಿ ವಾಸ್ತವ ಸ್ಥಿತಿಯ ಪರಿಶೀಲನೆ (ಗ್ರೌಂಡ್-ಟ್ರುಥಿಂಗ್) ನಡೆಯುತ್ತಿದ್ದು, ಅವುಗಳಲ್ಲಿ 10 ರಿಂದ 15 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.ಸರ್ಕಾರ ರೈತರು ಮತ್ತು ಜನರ ನೆರವಿಗೆ ಧಾವಿಸಬೇಕಿದೆ. ಸಾಧ್ಯವಾದಷ್ಟು ಹೆಚ್ಚಿನ ನೆರವು ನೀಡಲು ನಾವು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ,”ಎಂದು ಕಂದಾಯ ಖಾತೆಯನ್ನು ಹೊಂದಿರುವ ಪರಮೇಶ್ವರ ಅವರು ಬಳ್ಳಾರಿಯ ಹಾಲಕುಂದಿ ಗ್ರಾಮದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು

ಹಲವು ಪ್ರದೇಶಗಳಲ್ಲಿ ರೈತರು ಮೊದಲು ತೊಗರಿ ಬಿತ್ತನೆ ಮಾಡಿದ್ದರು, ಆದರೆ ಮಳೆಯ ಕೊರತೆಯಿಂದಾಗಿ ಬೆಳೆ ಹಾನಿಗೀಡಾಯಿತು. ನಂತರ ಸ್ವಲ್ಪ ಮಳೆಯಾದಾಗ ಜೋಳದಂತಹ ಪರ್ಯಾಯ ಬೆಳೆಗಳನ್ನು ಬೆಳೆಯಲು ಮುಂದಾದರು, ಆದರೆ ಅವು ಕೂಡ ವಿಫಲವಾದವು, ಎಂದು ಉಪಮುಖ್ಯಮಂತ್ರಿ ಹೇಳಿದರು.ಡಿಸಿಎಂ ಮಾಹಿತಿಯ ಪ್ರಕಾರ, ನೀರಾವರಿ ಪ್ರದೇಶಗಳು ಸೇರಿದಂತೆ ರಾಜ್ಯಾದ್ಯಂತ ಸುಮಾರು ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿವೆ. ಬಳ್ಳಾರಿ, ವಿಜಯನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವಿಶೇಷವಾಗಿ ತೀವ್ರವಾಗಿದೆ ಎಂದು ಅವರು ಹೇಳಿದರು. ಕೇಂದ್ರದ ನೆರವಿಗಾಗಿ ಕಾಯದೆ, ರಾಜ್ಯ ಸರ್ಕಾರ ತನ್ನದೇ ಆದ ಸಂಪನ್ಮೂಲಗಳಿಂದ ರೈತರಿಗೆ ಪರಿಹಾರದ ಮೊದಲ ಕಂತಾಗಿ 2,500 ರೂಪಾಯಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಪ್ರತಿ ಹೆಕ್ಟೇರ್‌ಗೆ 8,500 ರೂಪಾಯಿ ಪರಿಹಾರ ನಿಗದಿಯಾಗಿದೆ, ಆದರೆ ಕೇಂದ್ರದಿಂದ ಇಲ್ಲಿಯವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ ಎಂದು ಪರಮೇಶ್ವರ ತಿಳಿಸಿದರು. ಕೇಂದ್ರದಿಂದ ಒಂದು ಪೈಸೆಯೂ ಬಂದಿಲ್ಲ ಎಂದು ದೂರುತ್ತಾ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಮ್ಮ ಕಡೆಯಿಂದ ಸಾಧ್ಯವಿರುವ ಎಲ್ಲ ನೆರವನ್ನೂ ನಾವು ಒದಗಿಸುತ್ತೇವೆ. ಸಂಕಷ್ಟದಲ್ಲಿರುವ ರೈತರನ್ನು ನಾವು ಕೈಬಿಡುವುದಿಲ್ಲ, ಎಂದು ಅವರು ಹೇಳಿದರು. ಈಗಾಗಲೇ ಆದೇಶ ಹೊರಡಿಸಲಾಗಿದ್ದು, ಮೊದಲ ಕಂತಿನ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಿನ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು. ರಾಜ್ಯ ಕೇಂದ್ರಕ್ಕೆ ಎರಡು ಮನವಿಗಳನ್ನು ಸಲ್ಲಿಸಿದ್ದು, 177 ತಾಲೂಕುಗಳಲ್ಲಿ ಸುಮಾರು 46,000 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಿದೆ. ಅಲ್ಲದೆ, ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳ ಅಡಿಯಲ್ಲಿ 11,000 ಕೋಟಿ ರೂ.ನಿಂದ 11,500 ಕೋಟಿ ರೂ.ಗಳವರೆಗೆ ನೆರವು ಕೋರಿದೆ ಎಂದು ಅವರು ತಿಳಿಸಿದರು.

ನಷ್ಟದ ಮೊತ್ತ 46,000 ಕೋಟಿ ರೂ. ಎಂದು ನಾವು ಹೇಳಿದ್ದೇವೆ. ಆದರೆ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ನಮಗೆ ಎಷ್ಟು ಪಡೆಯಲು ಅರ್ಹತೆ ಇದೆಯೋ ಅಷ್ಟನ್ನು ಮಾತ್ರ ಕೋರಲು ಸಾಧ್ಯ. ಅದಕ್ಕಾಗಿಯೇ ನಾವು ಪರಿಹಾರವಾಗಿ ಸುಮಾರು 11,000 ಕೋಟಿ ರೂ.ಗಳನ್ನು ಕೋರಿದ್ದೇವೆ, ಎಂದು ಪರಮೇಶ್ವರ ಹೇಳಿದರು.ಕೇಂದ್ರದ ಮೂರು ತಂಡಗಳು ಕರ್ನಾಟಕಕ್ಕೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳನ್ನು ಪರಿಶೀಲಿಸಿವೆ ಎಂದು ಅವರು ಹೇಳಿದರು. ಈ ತಂಡಗಳು ಮಾದರಿ ಪರಿಶೀಲನೆ ನಡೆಸಿರುವುದರಿಂದ ಮತ್ತು ಉಪಗ್ರಹ ಆಧಾರಿತ ದತ್ತಾಂಶದ ಲಭ್ಯತೆ ಇರುವುದರಿಂದ, ಪ್ರತಿ ಹಳ್ಳಿಗೂ ಭೇಟಿ ನೀಡುವ ಅಗತ್ಯವಿರಲಿಲ್ಲ ಎಂದು ಅವರು ವಿವರಿಸಿದರು.ರೈತರ ಸಾಲ ವಸೂಲಾತಿಯನ್ನು ಮುಂದೂಡುವಂತೆ ಹಾಗೂ ಸಾಲ ಪುನರ್‌ರಚನೆ ಮತ್ತು ಮರುಹಣಕಾಸು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರವು ಬ್ಯಾಂಕುಗಳಿಗೆ ಸೂಚನೆ ನೀಡಿದೆ ಎಂದು ಪರಮೇಶ್ವರ ತಿಳಿಸಿದರು.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version