ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ

ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಬಹುಮತದೊಂದಿಗೆ ಸುಗಮ ಆಡಳಿತ ನಡೆಸುತ್ತಿದ್ದರೂ, ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಇದೀಗ ಅವರ ವಿರುದ್ಧ ಸ್ಟಿಂಗ್‌ ಆಪರೇಷನ್‌ ನಡೆಸುವ ಮೂಲಕ ರಾಜಕೀಯವಾಗಿ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಇಂದು ಭಾನುವಾರ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದರು. ಆದರೆ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ವ್ಯವಸ್ಥಿತವಾಗಿ ಕೆಲಸ ಮಾಡಲಾಯಿತು. ಭವಿಷ್ಯದಲ್ಲಿ ಅವರು ಮತ್ತೆ ರಾಜಕೀಯವಾಗಿ ಬಲಿಷ್ಠರಾಗಬಹುದು ಎಂಬ ಭಯದಿಂದ ಅವರ ವಿರುದ್ಧ ಸ್ಟಿಂಗ್‌ ಆಪರೇಷನ್‌ ನಡೆಸಲಾಗಿದೆ. ಇದರ ಹಿಂದಿನ ಉದ್ದೇಶ ಏನೆಂಬುದು ರಾಜ್ಯದ ಜನರಿಗೆ ತಿಳಿದಿದೆ ಎಂದು ಹೇಳಿದರು. ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಬೆಳವಣಿಗೆಗಳು ಚರ್ಚೆಗೆ ಗ್ರಾಸವಾಗಿವೆ. ಈ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಜನರು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜನರ ಕಷ್ಟಗಳನ್ನು ಅರ್ಥಮಾಡಿಕೊಳ್ಳದೆ ಸರ್ಕಾರ ತುಘಲಕ್‌ ದರ್ಬಾರ್‌ ನಡೆಸುತ್ತಿದೆ. ರಾಜ್ಯದ ಜನರು ಸೂಕ್ತ ಸಮಯದಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version