ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಿಳೆ-ಮಕ್ಕಳ ವಿರುದ್ಧ ದೌರ್ಜನ್ಯ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮಹಿಳೆ-ಮಕ್ಕಳ ವಿರುದ್ಧ ದೌರ್ಜನ್ಯ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಬೆಂಗಳೂರು: ಒಂದೆಡೆ ಅತ್ಯಾಚಾರಿ ಆರೋಪಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ, ಮತ್ತೊಂದೆಡೆ ಲೈಂಗಿಕ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುವುದೇ ತಡವಾಗುತ್ತಿದೆ ಎಂದು ರಾಜ್ಯದ ಹಲವು ಜನಪರ ಸಂಘಟನೆಯವರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ “ಬಡಮಕ್ಕಳು ವಿದ್ಯಾಭ್ಯಾಸಕ್ಕಾಗಿ ಮಠಕ್ಕೆ ಸೇರಿರುತ್ತಾರೆ. ಮುರುಘಾ ಸ್ವಾಮೀಜಿಯ ಲೈಂಗಿಕ ತೃಷೆಗಾಗಿ ಪ್ರೌಡಶಾಲೆ ವಿದ್ಯಾರ್ಥಿನಿಯರನ್ನು ಬಳಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ.” ಎಂದು ಹೇಳಿದರು.

ಲೈಂಗಿಕ ಕಿರುಕುಳದ ಹಿನ್ನೆಲೆಯಲ್ಲಿ ಫೋಕ್ಸೋ ಮತ್ತು ‌ಎಸ್.ಸಿ/ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪಿಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಕಠಿಣ ಕಾನೂನಿನ ವಿಚಾರಣೆಗೆ ಒಳಪಡಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಜೀವಾವಧಿ ‌ಶಿಕ್ಷೆಗೆ ಗುರಿಯಾಗಿದ್ದ 11  ಜನ ಆರೋಪಿಗಳನ್ನು ಸನ್ನಡತೆಯ ಆಧಾರದಲ್ಲಿ ಸ್ವಾತಂತ್ರ್ಯ ‌ದಿನದಂದು ಬಿಡುಗಡೆ ಮಾಡಲಾಗಿತ್ತು. ಅವರನ್ನು ತಕ್ಷಣವೇ ಅಮರಣಾಂತ ಕಠಿಣ ಸಜೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಲ್ಲದೆ, ಅದೇ ದಿನ ಮಹಿಳೆಯರ ಘನತೆಯ ರಕ್ಷಣೆ ಕುರಿತು ಕೆಂಪು ಕೋಟೆಯಲ್ಲಿ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಈ ಯಾವ ವಿಷಯವು ಗಮನಕ್ಕೆ ಬಂದಿಲ್ಲವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಲೇಖಕಿ ಡಾ. ವಿಜಯಮ್ಮ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ಎಸ್. ವಿಮಲಾ, ಹೋರಾಟಗಾರ್ತಿ ಕೃಪಾ ಆಳ್ವ, ಲೇಖಕಿ ಕೆ.ಷರೀಫಾ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ರಿಪಬ್ಲಿಕ್‌ ಪಾರ್ಟಿ ಆಫ್‌ ಇಂಡಿಯಾ ಅಧ್ಯಕ್ಷ ಆರ್‌. ಮೋಹನ್ ರಾಜ್, ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಅರಳಹಳ್ಳಿ, ಹೋರಾಟಗಾರರಾದ ಪ್ರಫುಲ್ಲಾ ಮಧುಕರ್, ಪುಷ್ಪಾ ಅಮರನಾಥ್, ಕವಿಯತ್ರಿ ವಸುಂಧರ ಭೂಪತಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಮುಖಂಡೆ ಗೌರಮ್ಮ, ಎಸ್‌ಎಫ್‌ಐ ರಾಜ್ಯ ಸಹ ಕಾರ್ಯದರ್ಶಿ ಭೀಮನಗೌಡ, ಎಸ್‌ಎಫ್‌ಐ ಮುಖಂಡ ಶಿವಕುಮಾರ್ ಸೇರಿದಂತೆ ಜನಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

ವಿಷಯಗಳು: #karnataka #peepal #peepalmedia #protest
PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು