ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ – ಗಡಿಪಾರು ಆದೇಶದ ಭೀತಿ

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ – ಗಡಿಪಾರು ಆದೇಶದ ಭೀತಿ

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಮುಂಬೈನಲ್ಲಿ ಶನಿವಾರ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ'(CJP) ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ ಅವರಿಗೆ ಈಗ ತೀವ್ರ ಸಂಕಷ್ಟ ಎದುರಾಗಿದೆ.

ಅಮೆರಿಕದ ಪ್ರಜೆಯಾಗಿರುವ ನಟ ಇಮ್ರಾನ್ ಖಾನ್ ಅವರು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೀಗ ಇಮ್ರಾನ್ ಖಾನ್ ವಿರುದ್ಧ ಮುಂಬೈನ ಗಮದೇವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈ ಕುರಿತು ‘ಎಕ್ಸ್’ (X) ಪೋಸ್ಟ್ ಮಾಡಿರುವ ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರು, “ನಾನು ಗಮದೇವಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಇಮ್ರಾನ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇನೆ. ನನ್ನ ದೂರಿಗೆ ಸ್ಪಂದಿಸಿದ ಪೊಲೀಸರು, ನಟ ಇಮ್ರಾನ್ ಖಾನ್ ಅವರಿಗೆ ಸಮನ್ಸ್ ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು, ಈ ಕುರಿತು ಎಫ್‌ಆರ್‌ಆರ್‌ಒ(FRRO) ವಿದೇಶಿ ಪ್ರಜೆಗಳ ವಿಭಾಗಕ್ಕೆ ವರದಿ ಕಳುಹಿಸಿದ್ದಾರೆ; ಜೊತೆಗೆ ನಾನು ಮುಂಬೈ ವಿಮಾನ ನಿಲ್ದಾಣದಲ್ಲಿರುವ ಎಫ್‌ಆರ್‌ಆರ್‌ಒ ವಲಸೆ ವಿಭಾಗಕ್ಕೂ ದೂರು ಸಲ್ಲಿಸಿದ್ದೇನೆ. ನಾನು ಎಫ್‌ಆರ್‌ಆರ್‌ಒ ಅಧಿಕಾರಿಯೊಂದಿಗೂ ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

ಇಮ್ರಾನ್ ಖಾನ್ ಅಮೆರಿಕದ ಪ್ರಜೆಯಾಗಿದ್ದು, ರಾಜಕೀಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಹಾಗೂ ಭಾರತದ ಸಾಗರೋತ್ತರ ಪೌರತ್ವ(OCI) ನಿಯಮಗಳು ಮತ್ತು ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರು ಕಾನೂನು ಕ್ರಮ ತೆಗೆದುಕೊಳ್ಳಬೇಕು ಮತ್ತು ಕೂಡಲೇ ಅವರನ್ನು ಆ ದೇಶಕ್ಕೆ ಗಡಿಪಾರು ಮಾಡಬೇಕು ಎಂದು ಕಿರೀಟ್ ಸೋಮಯ್ಯ ಅವರು ಒತ್ತಾಯಿಸಿದ್ದಾರೆ. ಭಾರತೀಯ ಪ್ರಜೆಗಳಿಗೆ ಇರುವಂತಹ ಹಕ್ಕುಗಳು ವಿದೇಶಿ ಪ್ರಜೆಗಳಿಗೆ ಇರುವುದಿಲ್ಲ, ಎಂದು ಕಿರೀಟ್ ಸೋಮಯ್ಯ ಅವರು ಈ ಹಿಂದೆ ಹೇಳಿದ್ದರು

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version