ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಲ್ಮಾನ್ ನಂತರ ಶಾರುಖ್ ಖಾನ್ ಗೂ ಬಂತು ಕೊಲೆ ಬೆದರಿಕೆ ಕರೆ, ತೀವ್ರಗೊಂಡ ತನಿಖೆ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ಸಿನಿಮಾ

• 1 ನಿಮಿಷದ ಓದು

ಸಲ್ಮಾನ್ ನಂತರ ಶಾರುಖ್ ಖಾನ್ ಗೂ ಬಂತು ಕೊಲೆ ಬೆದರಿಕೆ ಕರೆ, ತೀವ್ರಗೊಂಡ ತನಿಖೆ

ಬಾಲಿವುಡ್ ಕಿಂಗ್ ಖಾನ್ ಬಿರುದಾಂಕಿತ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ಗಢದ ರಾಯ್ಪುರದ ಫೈಜಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಈ ಬೆದರಿಕೆ ಬಂದಿದೆ.

ಶಾರುಖ್ ಖಾನ್ ಅವರ ವ್ಯೆಯಕ್ತಿಕ ಮೊಬೈಲ್‌ಗೆ ಇಂದು ವ್ಯಕ್ತಿಯೊಬ್ಬ ಕರೆ ಮಾಡಿ ಕೂಡಲೇ ಐವತ್ತು ಲಕ್ಷ ಹಣ ನೀಡುವಂತೆ ಬೆದರಿಕೆಯನ್ನು ವ್ಯಕ್ತಿ ಹಾಕಿದ್ದಾನೆ. ಹಣ ನೀಡದೇ ಇದ್ದರೆ ಹೆಣ ಬೀಳುತ್ತೆ ಎಂದು ಬೆದರಿಕೆಯನ್ನು ಹಾಕಿದ್ದಾನೆ. ಬೆದರಿಕೆ ಕರೆಗೆ ಹೆದರಿದ ಶಾರುಖ್ ಖಾನ್ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟ ಶಾರುಖ್ ಖಾನ್ ನೀಡಿದ ದೂರಿನ ಅನ್ವಯ ಬಾಂದ್ರಾ ಪೊಲೀಸರು BNS ಕಾಯಿದೆಯ ಸೆಕ್ಷನ್ 308(4) ಮತ್ತು 351(3)(4) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಗೆ ಬಲೆಯನ್ನು ಬೀಸಿದ್ದಾರೆ. ಬೆದರಿಕೆ ಕರೆ ಮಾಡಿರುವ ವ್ಯಕ್ತಿಯ ಮೊಬೈಲ್‌ ಲೊಕೇಷನ್ ಪತ್ತೆ ಮಾಡಿರುವ ಪೊಲೀಸರು, ವ್ಯಕ್ತಿಯನ್ನು ಹುಡುಕುತ್ತಾ ಛತ್ತೀಸ್ ಘಡ್ ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಬಾಬಾ ಸಿದ್ದಿಕಿ ಹತ್ಯೆಯ ನಂತರ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್, ಬಾಬಾ ಸಿದ್ದಿಕಿಯ ನಿಕಟ ಸಂಪರ್ಕದಲ್ಲಿ ಯಾರೆಲ್ಲ ಇದ್ದರು, ಅವರಿಗೆಲ್ಲ ಬಾಬಾ ಸಿದ್ದಿಕಿಯಂತೆಯೇ ಹೊಡೆದುರುಳಿಸವುದಾಗಿ ಹೇಳಿದ್ದ. ಇನ್ನೂ ಬಾಬಾ ಸಿದ್ದಿಕಿಗೆ ಕೇವಲ ಸಲ್ಮಾನ್ ಖಾನ್ ಮಾತ್ರ ಆಪ್ತವಾಗಿರಲಿಲ್ಲ. ಶಾರುಖ್ ಖಾನ್ ಕೂಡ ಆಪ್ತರಾಗಿದ್ದರು ಎಂಬುದು ಗಮನಾರ್ಹ.

ಸಧ್ಯ ಈ ಬೆದರಿಕೆ ಕರೆ ಬಿಷ್ಣೋಯ್ ಗ್ಯಾಂಗ್ ಕಡೆಯಿಂದಲೂ ಬಂದಿರಬಹುದು ಎಂಬ ಮಾಹಿತಿಯ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರದ ಕುರಿತು ಮುಂಬೈ ಪೊಲೀಸರು ಶಾರುಖ್ ಖಾನ್ ಬಳಿ ಪ್ರಶ್ನೆಯನ್ನು ಮಾಡಲಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು