ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಸೇನಾ ವಾಹನದ ಅಪಘಾತ ; 2 ಸೈನಿಕರು ಹುತಾತ್ಮ
ಲಿಂಕ್ ನಕಲಿಸಲಾಗಿದೆ ✓
ಮಿಲಿಟರಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಟ್ರಕ್ ಒಂದು ಆಯ ತಪ್ಪಿ ದೊಡ್ಡ ಕಂದಕಕ್ಕೆ ಬಿದ್ದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಇಬ್ಬರ ದುರ್ಮರಣದ ಜೊತೆಗೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡ ಸೈನಿಕರ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದ ನಿಖರ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದೆ.
ತೀವ್ರವಾಗಿ ಗಾಯಗೊಂಡಿದ್ದ ಮೂವರು ಸೈನಿಕರಿಗೆ ಪ್ರಥಮ ಚಿಕಿತ್ಸೆ ನಡೆಯುತ್ತಿದೆ. ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಕರೆದೊಯ್ಯಲಾಗಿದೆ ಎಂದು ಡಾ. ಇಕ್ಬಾಲ್ ಹೇಳಿದರು. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
P
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ