ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಚೈತ್ರಾ ಕುಂದಾಪುರ ವಿರುದ್ಧ ಇನ್ನೊಂದು ವಂಚನೆ ಪ್ರಕರಣ ದಾಖಲು!

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಚೈತ್ರಾ ಕುಂದಾಪುರ ವಿರುದ್ಧ ಇನ್ನೊಂದು ವಂಚನೆ ಪ್ರಕರಣ ದಾಖಲು!

ಬಟ್ಟೆಯಂಗಡಿ ಹಾಕಿಸಿ ಕೊಡುವುದಾಗಿ ಹೇಳಿ 5 ಲಕ್ಷ ರೂ ವಂಚನೆ, ಕೊಲೆ ಬೆದರಿಕೆ ಆರೋಪ

ಬ್ರಹ್ಮಾವರ: ಇತ್ತ ಬೆಂಗಳೂರಿನಲ್ಲಿ CCB ಪೊಲೀಸರು ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದ ಕಗ್ಗಂಟನ್ನು ಬಿಡಿಸಲು ತಿಣುಕುತ್ತಿದ್ದರೆ ಅತ್ತ ಉಡುಪಿ ಜಿಲ್ಲೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಇನ್ನೊಂದು ಪ್ರಕರಣ ದಾಖಲಾಗಿದೆ.

ಸುದಿನಾ ಎನ್ನುವ ಹೆಸರಿನ ಮೀನು ವ್ಯಾಪರಿಯೊಬ್ಬರಿಗೆ ಚೈತ್ರಾ ತನಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರ ಸಂಪರ್ಕವಿದ್ದ, ನಿಮಗೆ ಉಡುಪಿ ಮತ್ತು ಬ್ರಹ್ಮಾವರದಲ್ಲಿ ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಹೇಳಿ ಅವರಿಂದ ಆಗಾಗ ಒಂದಷ್ಟು ಹಣ ಪಡೆದಿದ್ದಾಳೆ. ಈ ಮೊತ್ತವು ಒಟ್ಟು 5 ಲಕ್ಷ ತಲುಪಿದ್ದು, ಅಂಗಡಿ ಮಾಡಿಸಿಕೊಡದ ಕಾರಣ ಸುದಿನ ಚೈತ್ರಾ ಬಳಿ ಹಣ ವಾಪಸ್‌ ಕೇಳಿದ್ದಾರೆ.

ಸುದಿನಾ ಮೂರು ಲಕ್ಷ ರೂಪಾಯಿ ಹಣವನ್ನು ತನ್ನ ಎರಡು ಬ್ಯಾಂಕ್‌ ಖಾತೆಗಳಿಂದ ಚೈತ್ರಾ ಖಾತೆಗೆ ಕಳುಹಿಸಿದ್ದರೆ, ಮಿಕ್ಕ ಹಣವನ್ನು ಆಗಾಗ ಕೊಟ್ಟಿದ್ದಾಗಿ ಹೇಳಿದ್ದಾರೆ.

ಆದರೆ 2015ರಲ್ಲಿ ಪರಿಚಯವಾದ ಚೈತ್ರಾ ಹಣ ಹಲವು ವರ್ಷಗಳು ಕಳೆದರೂ ಅಂಗಡಿ ಹಾಕಿಕೊಡುವ ಕುರಿತು ಆಸಕ್ತಿ ತೋರದ ಕಾರಣ ಸುದಿನಾ ಅವರಿಗೆ ಅವಳ ಕುರಿತು ಅನುಮಾನಗಳು ಮೂಡತೊಡಗಿವೆ. ಆಗ ಆ ವ್ಯಕ್ತಿಯು ಚೈತ್ರಾ ಬಳಿ ಹಣ ಮರಳಿಸುವಂತೆ ಕೇಳಿದಾಗ ಅವಳು ತಿರುಗಿಬಿದ್ದಿದ್ದಾಳೆ.

ಸುದಿನಾ ವಿರುದ್ಧ ಅತ್ಯಾಚಾರದ ಕೇಸು ದಾಖಲಿಸುವುದಾಗಿಯೂ ಚೈತ್ರಾ ಬೆದರಿಸಿರುವುದಾಗಿ ಅವರು ತಮ್ಮ ದೂರಿನಲ್ಲಿ ಹೇಳಿದ್ದಾರೆ, ಜೊತೆಗೆ ಬಾಡಿಗೆ ಗೂಂಡಾಗಳನ್ನು ಬಿಟ್ಟು ಕೊಲೆ ಮಾಡುವುದಾಗಿಯೂ ಅವರನ್ನು ಬೆದರಿಸಿದ್ದಾಳೆಂದು ಕೋಟಾ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿರುವ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು