ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ

ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ

ಹಾಸನ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಮಾ. 3ರಂದು ಬೆಳಗಿನ ಜಾವ 5.40ರ ಸುಮಾರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ. pdjadmnhassan@gmail.com ವಿಳಾಸಕ್ಕೆ Rameeza Hussain (rameeza-hussain@hotmail.com) ಎಂಬ ಇಮೇಲ್ ಐಡಿಯಿಂದ ಸಂದೇಶ ರವಾನೆಯಾಗಿದ್ದು, ಬೆಳಿಗ್ಗೆ 11.50ಕ್ಕೆ ನ್ಯಾಯಾಲಯ ಹಾಗೂ ನ್ಯಾಯಾಧೀಶರ ಕೊಠಡಿಯಲ್ಲಿ ಸೈನೈಡ್ ವಿಷಾನಿಲ ತುಂಬಿದ ಆರ್‌ಡಿಎಕ್ಸ್ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು. ಇದಲ್ಲದೆ, ಬೆಳಿಗ್ಗೆ 11 ಗಂಟೆಯೊಳಗೆ ನ್ಯಾಯಾಧೀಶರು ನಿರಪರಾಧಿ ನಾಗರಿಕನನ್ನು ಸ್ಥಳಾಂತರಿಸಬೇಕು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದ್ದು, 26/11 ಮುಂಬೈ ಭಯೋತ್ಪಾದಕ ದಾಳಿ ಹಾಗೂ ಅಜ್ಮಲ್ ಕಸಬ್ ಪ್ರಕರಣಕ್ಕೂ ಉಲ್ಲೇಖ ಮಾಡಲಾಗಿದೆ.

ಘಟನೆಯ ಮಾಹಿತಿ ಸಿಕ್ಕ ತಕ್ಷಣ DAR ಡಿವೈಎಸ್‌ಪಿ ಪಾಲಾಕ್ಷ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿ ಕಟ್ಟಡವನ್ನು ಭದ್ರತಾ ವಲಯಕ್ಕೆ ತೆಗೆದುಕೊಂಡರು.

ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ನ್ಯಾಯಾಲಯ ಆವರಣದ ಸಂಪೂರ್ಣ ತಪಾಸಣೆ ನಡೆಸಲಾಯಿತು.

ವಿಸ್ತೃತ ಪರಿಶೀಲನೆಯ ಬಳಿಕ ಯಾವುದೇ ಬಾಂಬ್ ಅಥವಾ ಅನುಮಾನಾಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು