ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾವೇರಿ: ಸುಪ್ರೀಂನಲ್ಲೂ ಕರ್ನಾಟಕಕ್ಕೆ ಹಿನ್ನೆಡೆ – CWMA ಆದೇಶ ಪಾಲಿಸಲು ಹೇಳಿದ ಕೋರ್ಟ್

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕಾವೇರಿ: ಸುಪ್ರೀಂನಲ್ಲೂ ಕರ್ನಾಟಕಕ್ಕೆ ಹಿನ್ನೆಡೆ – CWMA ಆದೇಶ ಪಾಲಿಸಲು ಹೇಳಿದ ಕೋರ್ಟ್

ದೆಹಲಿ: ಕಾವೇರಿ ಬಿಕ್ಕಟ್ಟು ಪರಿಹಾರಕ್ಕಾಗಿ ಸುಪ್ರೀಂ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಅಲ್ಲಿಯೂ ಹಿನ್ನೆಡೆಯಾಗಿದೆ. ಕೋರ್ಟ್‌ ಹದಿನೈದು ದಿನಗಳ ಕಾಲ 5,000 ಕ್ಯೂಸೆಕ್ಸ್‌ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿದೆ.

ಇಂದಿನ ಸುಪ್ರೀಂ ತೀರ್ಪಿನ ಮೇಲೆ ಕಾವೇರಿ ಕೊಳ್ಳದ ಜನರ ದೃಷ್ಟಿ ನೆಟ್ಟಿತ್ತು. ಇದೀಗ ಕೋರ್ಟ್‌ ನದಿ ಪ್ರಾಧಿಕಾರದ ಆದೇಶವನ್ನು ಪಾಲಿಸುವಂತೆ ಹೇಳಿರುವುದರಿಂದ ಸರ್ಕಾರವು ಇಕ್ಕಟ್ಟಿಗೆ ಸಿಲುಕಿದೆ.

ಅತ್ತ ದಿನದಿಂದ ದಿನಕ್ಕೆ ಕಾವೇರಿ ಹೋರಾಟ ಕಾವೇರುತ್ತಿದ್ದು, ರೈತರು, ಕನ್ನಡಪರ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ರಸ್ತೆಗಿಳಿದಿವೆ. ಈಗ ತೀರ್ಪಿನ ನಂತರ ಹೋರಾಟ ಇನ್ನಷ್ಟು ತೀವ್ರಗೊ‍ಳ್ಳುವ ಸಾಧ್ಯತೆಯಿದೆ.

ರಾಜ್ಯದೆಲ್ಲೆಡೆ ಮಳೆ ಕೊರತೆಯಿಂದಾಗಿ ಬರದ ಛಾಯೆ ಮೂಡಿದ್ದು, ಎಲ್ಲೆಡೆ ನೀರಿನ ಕೊರತೆ ಕಂಡುಬರುತ್ತಿದೆ, ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಳಿರುವುದು ಮೈಸೂರು, ಮಂಡ್ಯ, ಬೆಂಗಳೂರು ಭಾಗದ ಜನರನ್ನು ಚಿಂತೆಗೆ ದೂಡಿದೆ.

ಕಾವೇರಿಗೆ ನೀರು ಹರಿಸುವ ಕೊಡಗು ಪ್ರದೇಶಲ್ಲಿ ಈ ಬಾರಿ ಮಳೆ ಕೊರತೆಯಾಗಿರುವುದು ಈ ನೀರಿನ ಹಾಹಾಕಾರಕ್ಕೆ ಕಾರಣವಾಗಿವೆ. ಜೊತೆಗೆ ಮಲೆನಾಡು ಪ್ರದೇಶದಲ್ಲೂ ಈ ಬಾರಿ ಮಳೆ ಕೊರತೆ ಕಾಡುತ್ತಿದೆ. ಈಗಾಗಲೇ ಜನರು ತಮ್ಮ ಭತ್ತದ ಗದ್ದೆಗಳಿಗೆ ಬಾವಿಗಳಿಂದ ನೀರು ಪಂಪ್‌ ಮಾಡುತ್ತಿದ್ದು, ಜನವರಿ ವೇಳೆಗೆ ಬಾವಿಗಳು ಬತ್ತುವ ಆತಂಕದಲ್ಲಿದ್ದಾರೆ.

ಇನ್ನೊಂದೆಡೆ ಅಣೆಕಟ್ಟುಗಳು ತುಂಬದ ಕಾರಣ ವಿದ್ಯುತ್‌ ಉತ್ಪಾದನೆಯಲ್ಲೂ ಕೊರತೆಯಾಗುವ ಸಾಧ್ಯಗಳಿವೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು