ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಚಿವ ಸೋಮಶೇಖರ್‌ ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸಚಿವ ಸೋಮಶೇಖರ್‌ ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನ ಕೋನದಾಸಪುರದಲ್ಲಿ ವಸತಿ ಯೋಜನೆಯ ಕಾಮಗಾರಿ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ಬೃಹತ್‌ ಪ್ರತಿಭಟನೆ ನಡೆಸಿತು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಿಸಲು 2017ರ ಅಕ್ಟೋಬರ್‌ನಲ್ಲಿ ಟೆಂಡರ್‌ ಪ್ರಕ್ರಿಯೆ ಆರಂಭಿಸಿತ್ತು. ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬಿಡಿಎ ಅಧ್ಯಕ್ಷರಾಗಿದ್ದ ಸೋಮಶೇಖರ್‌, ತಮ್ಮ ಪ್ರಭಾವ ಬಳಸಿ ಟೆಂಡರ್‌ ಅಂತಿಮಗೊಳಿಸಿ ಕಾರ್ಯಾದೇಶ ನೀಡಿದ್ದಾರೆ. ನಂತರ ಯಡಿಯೂರಪ್ಪನವರ ಅಧಿಕಾರಾವಧಿಯಲ್ಲಿ ಕಾಮಗಾರಿಯನ್ನು ಮುಂದುವರಿಸಲು ಗುತ್ತಿಗೆದಾರ ಚಂದ್ರಕಾಂತ್‌ ರಾಮಲಿಂಗಂರಿಂದ ಇತರೆ ಆರೋಪಿಗಳಾದ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ₹29.5 ಕೋಟಿ ಲಂಚ ಪಡೆದಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಹೇಳಿದರು.

ಯಡಿಯೂರಪ್ಪನವರ ಸಂಬಂಧಿಕರು ಏಳು ನಕಲಿ ಕಂಪನಿಗಳನ್ನು ಬಳಸಿಕೊಂಡು ಹಣ ವರ್ಗಾವಣೆ ಮಾಡಿ ಲಂಚ ಪಡೆದಿದ್ದಾರೆ. ಈ ಸಂಬಂಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾಕ್ಷಿಸಹಿತ ದೂರು ದಾಖಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಸಚಿವ ಸೋಮಶೇಖರ್‌ರವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ, ಲೋಕಾಯುಕ್ತ ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡಲು ಅನುವು ಮಾಡಿಕೊಡಬೇಕು. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮಾತ್ರ ಸತ್ಯಾಂಶ ಹೊರಬರಲಿದೆ  ಎಂದು ಮೋಹನ್‌ ದಾಸರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, ಸಚಿವ ಸೋಮಶೇಖರ್‌ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದರೂ ಅವರನ್ನು ಇನ್ನೂ ಸಂಪುಟದಿಂದ ವಜಾ ಮಾಡಲು ಮುಂದಾಗದಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯ ಬಿಜೆಪಿ ಸರ್ಕಾರವು ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಅಧಿಕಾರದಲ್ಲಿ ಇರುವವರೆಗೂ ಜನರ ತೆರಿಗೆ ಹಣವು ಭ್ರಷ್ಟರ ಪಾಲಾಗುತ್ತಿರುತ್ತದೆ ಎಂದು ಹೇಳಿದರು.

ಎಎಪಿ ಮುಖಂಡರಾದ ವಿಜಯ್‌ ಶರ್ಮ, ಸಂಚಿತ್‌ ಸವ್ಹಾನಿ, ಬಿ.ಟಿ.ನಾಗಣ್ಣ, ಜಗದೀಶ್‌ ವಿ ಸದಂ, ದರ್ಶನ್‌ ಜೈನ್‌, ಸುರೇಶ್‌ ರಾಥೋಡ್‌, ಜಗದೀಶ್‌ ಚಂದ್ರ, ಕುಶಲಸ್ವಾಮಿ, ಉಷಾ ಮೋಹನ್‌, ಸುಹಾಸಿನಿ ಫಣಿರಾಜ್, ಡಾ. ಸತೀಶ್‌, ಶಶಿಕುಮಾರ್‌ ಆರಾಧ್ಯ, ಶ್ರೀಕಾಂತ್‌, ಗುರುಮೂರ್ತಿ, ಸುಮನ್‌ ಪ್ರಶಾಂತ್‌ ಮತ್ತಿತರ ಮುಖಂಡರು, ಯಶವಂತಪುರ ಕ್ಷೇತ್ರದ ನಾಯಕತು, ಹಾಗೂ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು