ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ನೇಮಕ; ಅಧಿಕೃತ ಆದೇಶವೊಂದೇ ಬಾಕಿ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ನೇಮಕ; ಅಧಿಕೃತ ಆದೇಶವೊಂದೇ ಬಾಕಿ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ಪಕ್ಷದ ವಿಶ್ವಸನೀಯ ಮೂಲಗಳು ತಿಳಿಸಿವೆ. ಮುಂದಿನ ಕೆಲ ಗಂಟೆಗಳಲ್ಲಿ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ.

ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ವಹಿಸಿಕೊಳ್ಳಲಿರುವ ಹಿನ್ನೆಲೆಯಲ್ಲಿ, ಕೆಪಿಸಿಸಿಗೆ ಹೊಸ ಅಧ್ಯಕ್ಷರ ಆಯ್ಕೆ ಅನಿವಾರ್ಯವಾಗಿತ್ತು. ಇದರಿಂದಾಗಿ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹಲವು ನಾಯಕರ ಹೆಸರು ಚಾಲ್ತಿಗೆ ಬಂದಿದ್ದವು.

ಆರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎರಡೂ ಬಣಗಳ ಬೆಂಬಲವಿತ್ತು. ಆದರೆ, ಕ್ಯಾಬಿನೆಟ್ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಏಕಕಾಲದಲ್ಲಿ ನಿಭಾಯಿಸುವ ಹಿನ್ನೆಲೆಯಲ್ಲಿ, ಹೈಕಮಾಂಡ್ ಇದರ ಬಗ್ಗೆ ಮರುಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ.

ಈಡಿಗ ಸಮುದಾಯಕ್ಕೆ ಸೇರಿದ ಹರಿಪ್ರಸಾದ್ ಅವರು ರಾಜ್ಯಸಭಾ ಸದಸ್ಯರಾಗಿ, ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿದ ಅನುಭವಿ ರಾಜಕಾರಣಿ. ಹೈಕಮಾಂಡ್ ಮತ್ತು ಸಿದ್ದರಾಮಯ್ಯ ಅವರ ವಿಶ್ವಾಸ ಗಳಿಸಿರುವ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನೇರ ನಿಲುವಿಗೆ ಹೆಸರಾಗಿದ್ದಾರೆ. ಚುನಾವಣೆ ಸನ್ನಿಹಿತವಾಗಿರುವ ಹೊತ್ತಿನಲ್ಲಿ ಅವರ ಸಂಘಟನಾ ಶಕ್ತಿ ಮತ್ತು ಸೈದ್ಧಾಂತಿಕ ಸ್ಪಷ್ಟತೆ ಹೈಕಮಾಂಡ್‌ಗೆ ಪ್ರಮುಖ ಅಂಶಗಳಾಗಿ ಕಂಡಿವೆ ಎಂದು ಪಕ್ಷದ ಮೂಲಗಳು ಹೇಳಿವೆ.

ಅಧಿಕೃತ ಆದೇಶ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆ ಇದ್ದು, ಹೊಸ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಮುಂದಿನ ಎರಡು ವರ್ಷಗಳ ಸಂಘಟನಾ ಚಟುವಟಿಕೆ ಹಮ್ಮಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ.

ಈ ವರದಿ ಪಕ್ಷದ ಆಂತರಿಕ ಮೂಲಗಳ ಮಾಹಿತಿಯನ್ನು ಆಧರಿಸಿದ್ದು, ಅಧಿಕೃತ ಪ್ರಕಟಣೆ ಹೊರಬಂದ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು