ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯಾರ್ಥಿಗಳ ಪ್ರವಾಸದಲ್ಲಿ ಸೆಲ್ಫೀ-ರೀಲ್ಸ್‌ಗೆ ಬ್ರೇಕ್ – ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿ

ವಿದ್ಯಾರ್ಥಿಗಳ ಪ್ರವಾಸದಲ್ಲಿ ಸೆಲ್ಫೀ-ರೀಲ್ಸ್‌ಗೆ ಬ್ರೇಕ್ – ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಂದ ಕೈಗೊಳ್ಳುವ ಶೈಕ್ಷಣಿಕ ಪ್ರವಾಸಗಳಲ್ಲಿ ವಿದ್ಯಾರ್ಥಿಗಳು ಸೆಲ್ಫೀ ಹಾಗೂ ರೀಲ್ಸ್‌ ಚಿತ್ರೀಕರಣ ಮಾಡುವುದನ್ನು ನಿಷೇಧಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳು ಅಪಾಯಕಾರಿ ಸ್ಥಳಗಳಲ್ಲಿ ಮೈಮರೆತು ಸೆಲ್ಫೀ, ರೀಲ್ಸ್‌ ಮಾಡುವುದರಿಂದ ಸಂಭವಿಸುತ್ತಿರುವ ಅವಘಡಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಇಲಾಖೆ ಈ ಮಾರ್ಗಸೂಚಿ ರೂಪಿಸಿದೆ. ಪ್ರವಾಸಕ್ಕೆ ತೆರಳುವ ಮುನ್ನವೇ ವಿದ್ಯಾರ್ಥಿಗಳಿಗೆ ಸೆಲ್ಫೀ ಹಾಗೂ ರೀಲ್ಸ್‌ ಚಿತ್ರೀಕರಣಕ್ಕೆ ಅವಕಾಶವಿಲ್ಲ ಎಂಬುದನ್ನು ಪ್ರಾಂಶುಪಾಲರು ಸ್ಪಷ್ಟವಾಗಿ ತಿಳಿಸಬೇಕು. ಪ್ರವಾಸದ ಸಂದರ್ಭದಲ್ಲಿ ಈ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಇಲಾಖೆಯ ಅನುಮತಿ ಪಡೆಯದೆ ಶೈಕ್ಷಣಿಕ ಪ್ರವಾಸ ಕೈಗೊಳ್ಳುವಂತಿಲ್ಲ. ಪ್ರವಾಸಕ್ಕೂ ಮುನ್ನ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಪತ್ರ ಪಡೆದು, ಪೋಷಕರ ಸಹಿ ಮಾಡಿಸಿ ಇಲಾಖೆಗೆ ಸಲ್ಲಿಸಬೇಕು. ಇಲಾಖೆಯಿಂದ ಅನುಮತಿ ನೀಡಿರುವ ಸ್ಥಳಗಳನ್ನು ಹೊರತುಪಡಿಸಿ ಇತರೆ ಪ್ರದೇಶಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುವಂತಿಲ್ಲ.

ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹಲವು ನಿಯಮಗಳನ್ನು ರೂಪಿಸಲಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆ ಸೂಚಿಸಿದೆ.

ಪ್ರಮುಖ ನಿಯಮಗಳು

  • ವಿದ್ಯಾರ್ಥಿನಿಯರ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಬೇಕು.
  • ಶೈಕ್ಷಣಿಕ ಪ್ರವಾಸವು 5 ದಿನಗಳನ್ನು ಮೀರಬಾರದು.
  • ವಿದ್ಯಾರ್ಥಿಗಳೊಂದಿಗೆ ಕಾಯಂ ಅಧ್ಯಾಪಕರು ಕಡ್ಡಾಯವಾಗಿ ಇರಬೇಕು.
  • ಮಳೆಗಾಲದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ಇರುವುದಿಲ್ಲ.
  • ಅತಿಥಿ ಉಪನ್ಯಾಸಕರನ್ನಷ್ಟೇ ಪ್ರವಾಸಕ್ಕೆ ಕಳುಹಿಸುವಂತಿಲ್ಲ.
  • ಪ್ರವಾಸದ ಕುರಿತು ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
  • ಪ್ರವಾಸಕ್ಕೆ ತೆರಳುವ ಅಧ್ಯಾಪಕರ ಸಂಖ್ಯೆ 4ಕ್ಕಿಂತ ಹೆಚ್ಚಿರಬಾರದು.
  • ಕನಿಷ್ಠ ಇಬ್ಬರು ಮಹಿಳಾ ಅಧ್ಯಾಪಕಿಯರು ಇರಬೇಕು.
  • ಸಂಬಂಧಪಟ್ಟ ವಿಭಾಗದ ಅಧ್ಯಾಪಕರನ್ನು ಹೊರತುಪಡಿಸಿ ಬೇರೆ ವಿಭಾಗದ ಅಧ್ಯಾಪಕರು ಪ್ರವಾಸಕ್ಕೆ ತೆರಳುವಂತಿಲ್ಲ.
  • ಪ್ರವಾಸದ ವೇಳೆ ವಿದ್ಯಾರ್ಥಿಗಳು ಸೆಲ್ಫೀ ಹಾಗೂ ರೀಲ್ಸ್‌ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version