Breaking News : ಬಿಸಿ ಪಾಟೀಲ್ ಅಳಿಯ ಆತ್ಮ*ತ್ಯೆಗೆ ಶರಣು, ಕಾರಣ ನಿಗೂಢ
ಲಿಂಕ್ ನಕಲಿಸಲಾಗಿದೆ ✓
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ, ಬಿಸಿ ಪಾಟೀಲ್ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸ್ಥಳೀಯರ ಮುಂಜಾಗ್ರತೆ ನಡುವೆ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾದರೂ ಜೀವ ಉಳಿಯಲಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.
ದಾವಣಗೆರೆ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್, 15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
KA 68 M 1458 ನಂಬರಿನ Venue ಕಾರಿನಲ್ಲಿ ಬಂದಿದ್ದ ಪ್ರತಾಪಕುಮಾರ, ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಆದ್ರೆ, ಪ್ರತಾಪಕುಮಾರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ