ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ನನ್ನ ಮೇಲೆ ಇಡಿ, ಐಟಿ ದಾಳಿ ನಡೆಸಲು ಕೇಂದ್ರ ಸಚಿವರಿಂದ ಸಂಚು – ಪ್ರಿಯಾಂಕ್‌ ಖರ್ಗೆತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದರು HD ಸ್ಟಿಂಗ್ ಸ್ವಾಮಿ – ಎಂ. ಲಕ್ಷ್ಮಣ್ಮನುವ್ಯಾದಿ ಅಡ್ಡಂಡ ಕಾರಿಯಪ್ಪನ ಮುಖಕ್ಕೆ ಮಸಿರಾಜಧಾನಿಯಲ್ಲಿ ಅಕ್ರಮ ಪಿಜಿಗಳ ಹಾವಳಿ ನಿಯಂತ್ರಣಕ್ಕೆ – GBA ಹೊಸ ಮಾರ್ಗಸೂಚಿವಾರದ ಹಿಂದೆ ನಾಪತ್ತೆಯಾಗಿದ್ದ ದಲಿತ ನಾಯಕ – ಧರ್ಮಸ್ಥಳದಲ್ಲಿ ಶವವಾಗಿ ಪತ್ತೆಆಂಧ್ರ ಕರಾವಳಿಗೆ ಭಾಗಗಳಿಗೆ ಅಪ್ಪಳಿಸಿದ ಚಂಡಮಾರುತ, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತಅಮಿತ್ ಶಾ ಭೇಟಿಯಾದ ಚಿರಂಜೀವಿ, ರಾಮ್ ಚರಣ್; ಭೇಟಿಯ ಉದ್ದೇಶ ಏನು ಗೊತ್ತಾ?ವಿಜಯ ಪ್ರಸಾದ್ ಹೊಸ ಸಿನಿಮಾದಲ್ಲಿ ರಚಿತಾ ರಾಮ್; ಈ ಬಾರಿ ಡಿಫರೆಂಟ್ ಆಗಿ ಪ್ರೇಕ್ಷಕರ ಮುಂದೆ!ಕೆಪಿಎಸ್‌ಸಿ ನೇಮಕಾತಿ ಅಕ್ರಮ ತನಿಖೆಗೆ ಹೊಸ ಸಾರಥಿ: ಎಸ್‌ಐಟಿ ಜವಾಬ್ದಾರಿ ಆರ್. ಹಿತೇಂದ್ರ ಹೆಗಲಿಗೆಕಬ್ಬು ಬೆಲೆ ಬಿಕ್ಕಟ್ಟು: ಇಂದು ಕಾರ್ಖಾನೆ ಮಾಲೀಕರು-ರೈತ ಸಂಘಟನೆಗಳ ಸಭೆ; ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆಗಾಂಧಿ ಹತ್ಯೆಯ ಸತ್ಯ ನಾಟಕ ವಿವಾದ: ಸುಚಿತ್ರಾ ಫಿಲಂ ಸೊಸೈಟಿಗೆ ಬನಶಂಕರಿ ಪೊಲೀಸರ ನೋಟಿಸ್ಮೋದಿ ಅವರಿಗೆ ಬಹಿರಂಗ ಚರ್ಚೆಗೆ ರಾಹುಲ್ ಗಾಂಧಿ ಸವಾಲು; ವಿದೇಶಿ ಬೆಂಬಲದ ಆರೋಪಕ್ಕೆ ತಿರುಗೇಟು16 ವರ್ಷಗಳ ಬಳಿಕ ದೇಶದಲ್ಲಿ ಜನಗಣತಿ ಪ್ರಕ್ರಿಯೆಗೆ ಅಧಿಕೃತ ವೇಳಾಪಟ್ಟಿ ಪ್ರಕಟ; ಜನವರಿ 25ರಿಂದ ಮನೆಮನೆ ಸಮೀಕ್ಷೆ ಆರಂಭಅಸ್ಸಾಂ: ಮುಸ್ಲಿಂ ಬಾಹುಳ್ಯದ ಆಲಂಗಂಜ್‌ ಪ್ರದೇಶದಲ್ಲಿ ತೆರವು ಕಾರ್ಯಾಚರಣೆಯಿಂದ ನಿರ್ವಸತಿಗರಾದ 4,000ಕ್ಕೂ ಹೆಚ್ಚು ನಿವಾಸಿಗಳುಟಿಕೆಟ್ ರೇಟ್‌ ಜಾಸ್ತಿ ಅನ್ಸಿದ್ರೆ ವಿಮಾನದಲ್ಲಿ ಓಡಾಡಬೇಡಿ: ಸುಪ್ರೀಂ ಕೋರ್ಟ್SIR, EVM ವಿಚಾರದಲ್ಲಿ ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರ ಸಿದ್ಧ: ರಾಹುಲ್ ಗಾಂಧಿಗೆ ಅಮಿತ್ ಶಾ ಸವಾಲುಎಸ್‌ಐಆರ್‌ ಪ್ರತಿಭಟನೆ | ಬಾಂಬೆ ಹೈಕೋರ್ಟ್‌ ಎದುರು ಬೇಷರತ್‌ ಕ್ಷಮೆಯಾಚಿಸಿ‌, ಮುಚ್ಚಳಿಕೆ ಬರೆದುಕೊಟ್ಟ ನಟ ಇಮ್ರಾನ್‌ ಖಾನ್ಅಡ್ಡಂಡ ಪ್ರಕರಣ | ಸಂವಿಧಾನದ ಮೇಲೆ ಸವಾರಿ ಮಾಡಲು ಯತ್ನಿಸಿದರೆ ಜನರೇ ಕಾಂಗ್ರೆಸಿಗೆ ಬುದ್ಧಿ ಕಲಿಸುತ್ತಾರೆ: ತೇಜಸ್ವಿ ಸೂರ್ಯ ವಾಗ್ದಾಳಿಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ: ನಂದಿನಿ ಮೊಸರು ದರ ಲೀಟರ್‌ಗೆ ₹2 ಇಳಿಕೆಗೆ ಸಿಎಂ ಸೂಚನೆಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ: ಆರು ಪ್ರಶ್ನೆಗಳ ಪಟ್ಟಿಯೊಂದಿಗೆ ಕಂಪನಿಗಳನ್ನು ಸಂಪರ್ಕಿಸಿದ ಕರವೇ

ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದರು HD ಸ್ಟಿಂಗ್ ಸ್ವಾಮಿ – ಎಂ. ಲಕ್ಷ್ಮಣ್

ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದರು  HD  ಸ್ಟಿಂಗ್ ಸ್ವಾಮಿ – ಎಂ. ಲಕ್ಷ್ಮಣ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ.

ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ “HD ಸ್ಟಿಂಗ್ ಸ್ವಾಮಿಯಾಗಿದ್ದಾರೆ. ಅವರ ಮನೆಯಿಂದಲೇ ಸ್ಟಿಂಗ್ ಆಪರೇಷನ್ ವಿಡಿಯೋ ಅಪ್ಲೋಡ್ ಆಗಿದ್ದು, 29 ಲಕ್ಷ ರೂ ವಹಿವಾಟು ನಡೆದಿದೆ ಎಂದು ಆರೋಪಿಸಿದ್ದಾರೆ.

ಕುಮಾರಸ್ವಾಮಿ ಸುದ್ದಿಗೋಷ್ಠಿ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ ಕಿಂಗ್‌ನ ಪೆನ್ ಡ್ರೈವ್ ಬ್ರದರ್ ಎಂಬ ಫಲಕ ಪ್ರದರ್ಶಿಸಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಹೆಸರನ್ನು ತಳಕು ಹಾಕಿ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.

“2026ರ ಆಗಸ್ಟ್ 27ರಂದು ಎಚ್. ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಪ್ರಧಾನಿಗೆ ಸ್ಟಿಂಗ್ ವಿಡಿಯೋ ತೋರಿಸಿ, ‘ಈ ಒಂದು ವಿಡಿಯೋ ಸಾಕು, ರಾಜ್ಯದಲ್ಲಿ ಕಾಂಗ್ರೆಸ್ ಸಂಹಾರ ಮಾಡಲು ಅನುಮತಿ ನೀಡಿ’ ಎಂದು ಮನವೊಲಿಸಿದ್ದರು. ಇದಕ್ಕೆ ಪ್ರಧಾನಿ ಮೋದಿ ಅವರು ‘ಗೋ ಅಹೆಡ್’ ಎಂದಿದ್ದಾರೆ. ಈ ವಿಚಾರವನ್ನು ಸ್ವತಃ ಕುಮಾರಸ್ವಾಮಿ ಅವರೇ ತಮ್ಮ ಆಪ್ತರ ಬಳಿ ಹೇಳಿಕೊಂಡಿರುವ ಆಡಿಯೋ ಸಾಕ್ಷಿ ನಮ್ಮ ಬಳಿ ಇದೆ ಎಂದು ಬಾಂಬ್ ಸಿಡಿಸಿದರು.

ಕಳೆದ ಒಂದು ತಿಂಗಳಿಂದ ಕುಮಾರಸ್ವಾಮಿ ಸತತ ಸುದ್ದಿಗೋಷ್ಠಿಗಳನ್ನು ನಡೆಸಿ ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಜನಪ್ರಿಯತೆ ಸಹಿಸಲಾಗದೆ, 2028ಕ್ಕೆ ಅಧಿಕಾರ ಹಿಡಿಯುವ ದುರುದ್ದೇಶದಿಂದ ಕುಮಾರಸ್ವಾಮಿಗೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸುಪಾರಿ ಕೊಟ್ಟಿದ್ದಾರೆ. ಈ ಕಥೆಯ ಡೈರೆಕ್ಟರ್, ಪ್ರೊಡ್ಯೂಸರ್ ಮತ್ತು ಆ್ಯಕ್ಟರ್ ಎಲ್ಲವೂ ಕುಮಾರಸ್ವಾಮಿಯವರೇ ಎಂದು ವಾಗ್ದಾಳಿ ನಡೆಸಿದರು.

ಸ್ಟಿಂಗ್ ಕೆಲಸಕ್ಕಾಗಿ ಪ್ರಜ್ವಲ್ ಪ್ರಸಾದ್, ರಿತೇಶ್ ಹಾಗೂ ವಿನೋದ್ ಎಂಬುವವರನ್ನು ಕುಮಾರಸ್ವಾಮಿ ನೇಮಿಸಿಕೊಂಡಿದ್ದರು. ಇವರಿಗೆ 1 ಲಕ್ಷದಿಂದ 2 ಲಕ್ಷದವರೆಗೆ ಸಂಬಳ ನಿಗದಿ ಮಾಡಲಾಗಿತ್ತು. ಬಾಗೇಪಲ್ಲಿ ಪ್ರಶಾಂತ್ ಮೂಲಕ ವಿಡಿಯೋ ಪಡೆದು, ರಿತೇಶ್ ಮತ್ತು ವಿನೋದ್‌ಗೆ 50,000 ರೂ. ನೀಡಿ ಹೊಸ ಮೊಬೈಲ್ ಖರೀದಿಸಲಾಗಿತ್ತು. ಆ ಮೊಬೈಲ್‌ನಿಂದ ಕುಮಾರಸ್ವಾಮಿ ಅವರ ಸಮ್ಮುಖದಲ್ಲೇ ದೆಹಲಿ ನಿವಾಸದಿಂದ ವಿಡಿಯೋ ಅಪ್‌ಲೋಡ್ ಮಾಡಲಾಗಿದೆ ಎಂದು ಬಂಧಿತ ಆರೋಪಿ ರಿತೇಶ್ ಸ್ವತಃ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಅಲ್ಲದೆ, ಈ ಮೂವರ ಖಾತೆಗಳಿಂದ ಮೂರು ಪ್ರತ್ಯೇಕ ದಿನಗಳಲ್ಲಿ 29 ಲಕ್ಷ ಹಣಕಾಸು ವಹಿವಾಟು ನಡೆದಿದೆ. ಈ ಹಣ ಯಾರದ್ದು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ವಿಷಯಗಳು: #karnataka #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು